ಶನಿವಾರ, ಜೂನ್ 19, 2021
23 °C

ಕಿಮ್ಸ್‌ ಆಡಳಿತ ವೈದ್ಯಾಧಿಕಾರಿ ಬದಲಾವಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ಕೆಂಪೇಗೌಡ ವೈದ್ಯಕೀಯ ಕಾಲೇಜಿನ ಆಸ್ಪತ್ರೆಯ (ಕಿಮ್ಸ್) ವೈದ್ಯಾಧಿಕಾರಿ ಡಾ. ವಿನೋದ್ ಅವರ ಸ್ಥಾನಕ್ಕೆ ಡಾ. ಮುರಳಿ ಅವರನ್ನು ನೇಮಕ ಮಾಡಲಾಗಿದೆ. 

ಎರಡು ದಿನಗಳ ಹಿಂದಷ್ಟೇ ಸಮಯಕ್ಕೆ ಸರಿಯಾಗಿ ಆಕ್ಸಿಜನ್ ಸಿಲಿಂಡರ್ ಸರಬರಾಜು ಆಗದ ಪರಿಣಾಮ ರೋಗಿಗಳಿಗೆ ಆಮ್ಲಜನಕದ ಕೊರತೆ ಉಂಟಾಗಿ, 20ಕ್ಕೂ ಅಧಿಕ ರೋಗಿಗಳನ್ನು ಬೇರೆ ಆಸ್ಪತ್ರೆಗಳಿಗೆ ಸ್ಥಳಾಂತರ ಮಾಡಲಾಗಿತ್ತು. ಇದರ ಬೆನ್ನಲ್ಲೇ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಅವರು ಆಸ್ಪತ್ರೆಗೆ ಭೇಟಿ ನೀಡಿ, ಘಟನೆಯ ಬಗ್ಗೆ ಮಾಹಿತಿ ಪಡೆದಿದ್ದರು.

ಈಗ ವೈದ್ಯಾಧಿಕಾರಿಯನ್ನು ಬದಲಾವಣೆ ಮಾಡಲಾಗಿದೆ. ಆದರೆ, ಅವರ ಬದಲಾವಣೆಗೂ ಈ ಘಟನೆಗೂ ಸಂಬಂಧವಿಲ್ಲ. ಅವರ ವಿರುದ್ಧ ಹಲವು ವೈದ್ಯರು ಅಸಮಾಧಾನ ವ್ಯಕ್ತಪಡಿಸಿದ ಕಾರಣ ಬದಲಾವಣೆ ಮಾಡಲಾಗಿದೆ ಎಂದು ಸಂಸ್ಥೆಯ ಮೂಲಗಳು ತಿಳಿಸಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು