ಶುಕ್ರವಾರ, ಜೂನ್ 25, 2021
29 °C

ಕೃತಕ ಆಮ್ಲಜನಕ ಕೊರತೆ: ರೋಗಿಗಳ ಸ್ಥಳಾಂತರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ಕೆಂಪೇಗೌಡ ವೈದ್ಯಕೀಯ ಕಾಲೇಜಿನಲ್ಲಿ (ಕಿಮ್ಸ್) ಕೃತಕ ಆಮ್ಲಜನಕ ಕೊರತೆ ಉಂಟಾದ ಹಿನ್ನೆಲೆಯಲ್ಲಿ, 50ಕ್ಕೂ ಹೆಚ್ಚು ಕೊರೊನಾ ಸೋಂಕಿತರು ಮತ್ತು ಇತರೆ ರೋಗಿಗಳನ್ನು ಸಮೀಪದ ಆಸ್ಪತ್ರೆಗಳಿಗೆ ವರ್ಗಾಯಿಸಲಾಗಿದೆ. 

ಆಸ್ಪತ್ರೆಯಲ್ಲಿ 210 ಸೋಂಕಿತರು ಸೇರಿದಂತೆ ಒಟ್ಟು 350 ಮಂದಿ ಪಡೆಯುತ್ತಿದ್ದರು. ಎರಡು ದಿನಗಳಿಂದ ಆಸ್ಪತ್ರೆಗೆ ಆಕ್ಸಿಜನ್ ಸಿಲಿಂಡರ್ ಸರಬರಾಜಾಗಿಲ್ಲ. ಸರಬರಾಜುದಾರರು ಸೋಮವಾರ ರಾತ್ರಿ ಸಿಲಿಂಡರ್ ಸರಬರಾಜು ಮಾಡುವುದಾಗಿ ಹೇಳಿದ್ದರಾದರೂ ಸಮಯಕ್ಕೆ ಸರಿಯಾಗಿ ಪೂರೈಕೆ ಮಾಡದಿರುವುದರಿಂದ ಸಮಸ್ಯೆ ಎದುರಾಗಿದೆ ಎಂದು ವೈದ್ಯರು ಹೇಳಿದ್ದಾರೆ. 

ಇದರಲ್ಲಿ 27 ಮಕ್ಕಳು, 19 ಜನ ಗಂಭೀರ ಸಮಸ್ಯೆಯ ರೋಗಿಗಳಿದ್ದು, ತಕ್ಷಣ ರೋಗಿಗಳನ್ನು ಆಂಬುಲೆನ್ಸ್‌ ಮೂಲಕ ವಿಕ್ಟೋರಿಯಾ, ಬೌರಿಂಗ್ ಹಾಗೂ ರಾಜೀವ್ ಗಾಂಧಿ ಎದೆರೋಗ ಆಸ್ಪತ್ರೆಗಳಿಗೆ ವರ್ಗಾಯಿಸಿಸಲಾಗಿದೆ.

ಈ ಕುರಿತು ಟ್ವೀಟ್‌ ಮೂಲಕ ಪ್ರತಿಕ್ರಿಯಿಸಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ‘ಕಿಮ್ಸ್‌ ಖಾಸಗಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ವಿಚಾರ ತಿಳಿದ ಕೂಡಲೇ, ರೋಗಿಗಳನ್ನು ಬೇರೆ ಆಸ್ಪತ್ರೆಗಳಿಗೆ ವರ್ಗಾಯಿಸುವ ವ್ಯವಸ್ಥೆ ಮಾಡಿದ್ದೇನೆ. ಮುಂಜಾಗ್ರತಾ ಕ್ರಮವಾಗಿ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ 40 ಹಾಸಿಗೆಗಳನ್ನು ಸಿದ್ಧಪಡಿಸಲಾಗಿದೆ’ ಎಂದು ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು