ಕಿಮ್ಸ್‌: ಪ್ರತಿಭಟನೆ ಹಿಂಪಡೆದ ವೈದ್ಯರು

7

ಕಿಮ್ಸ್‌: ಪ್ರತಿಭಟನೆ ಹಿಂಪಡೆದ ವೈದ್ಯರು

Published:
Updated:

ಬೆಂಗಳೂರು: ಕಿಮ್ಸ್‌ ಸೇರಿದಂತೆ ಸಂಘದ ವಿವಿಧ ಸಂಸ್ಥೆಗಳಲ್ಲಿ ಹೆಚ್ಚುವರಿ ಸಿಬ್ಬಂದಿಯನ್ನು ನೇಮಕಾತಿ ಮಾಡಿಕೊಂಡಿರುವುದನ್ನು ವಿರೋಧಿಸಿ 13 ದಿನಗಳಿಂದ ನಡೆಸುತ್ತಿದ್ದ ಪ್ರತಿಭಟನೆ ಶನಿವಾರ ಅಂತ್ಯಗೊಂಡಿದೆ.

‘ತುಟ್ಟಿ ಭತ್ಯೆ ನೀಡುವುದಕ್ಕೆ ಒಪ್ಪಿರುವ ಆಡಳಿತ ಮಂಡಳಿ, ಹೆಚ್ಚುವರಿ ನೌಕರರನ್ನು ಕೈಬಿಡುವ ಒಪ್ಪಿಗೆ ಪತ್ರಕ್ಕೆ ಸಹಿ ಹಾಕುವುದಾಗಿಯೂ ಭರವಸೆ ನೀಡಿದೆ. ಹೀಗಾಗಿ ಪ್ರತಿಭಟನೆ ಹಿಂಪಡೆದುಕೊಂಡಿದ್ದೇವೆ. ಭಾನುವಾರದಿಂದಲೇ ಹೊರರೋಗಿಗಳ ವಿಭಾಗದಲ್ಲಿ ವೈದ್ಯರು ಕೆಲಸ ಮಾಡಲಿದ್ದಾರೆ’ ಎಂದು ನೌಕರರ ಸಂಘದ ಅಧ್ಯಕ್ಷ ಡಾ. ವಿನೋದ್ ಕುಮಾರ್‌ ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !