ಸೋಮವಾರ, 9 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೆಕೆಆರ್‌ಟಿಸಿ: ಅನುಕಂಪದ ಆಧಾರದಡಿ ನೇಮಕಾತಿ ಆದೇಶ ಪತ್ರ ವಿತರಣೆ

Published 31 ಆಗಸ್ಟ್ 2024, 15:46 IST
Last Updated 31 ಆಗಸ್ಟ್ 2024, 15:46 IST
ಅಕ್ಷರ ಗಾತ್ರ

ಬೆಂಗಳೂರು: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ (ಕೆಕೆಆರ್‌ಟಿಸಿ) ಮೃತ ನೌಕರರ ಅವಲಂಬಿತರಿಗೆ ಅನುಕಂಪದ ಆಧಾರದಡಿಯಲ್ಲಿ ನೇಮಕಾತಿ ಆದೇಶ ಪತ್ರವನ್ನು ವಿತರಿಸಲಾಯಿತು.

ಆದೇಶ ಪತ್ರ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ‘ಕೆಕೆಆರ್‌ಟಿಸಿಯಲ್ಲಿ ಅನುಕಂಪದ ಆಧಾರದ ಮೇಲೆ ನೌಕರಿ ನಿರೀಕ್ಷೆಯಲ್ಲಿದ್ದ ಅಭ್ಯರ್ಥಿಗಳ ಪೈಕಿ ಅರ್ಹತೆಯನುಸಾರ ಹಾಗೂ ಖಾಲಿ ಹುದ್ದೆಗಳ ಲಭ್ಯತೆಗೆ ಅನುಗುಣವಾಗಿ 2023ರ ಜನವರಿಯಿಂದ 2024ರ ಆಗಸ್ಟ್‌ವರೆಗೆ 141 ಅಭ್ಯರ್ಥಿಗಳಿಗೆ ದರ್ಜೆ-3 (ಮೇಲ್ವಿಚಾರಕೇತರ) ಮತ್ತು ದರ್ಜೆ-4ರ ಹುದ್ದೆಗಳಿಗೆ ನೇಮಕ ಮಾಡಲಾಗಿದೆ’ ಎಂದು ತಿಳಿಸಿದರು.

ನಿಗಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಚಾಲಕ, ನಿರ್ವಾಹಕ ಹಾಗೂ ತಾಂತ್ರಿಕ ಹುದ್ದೆಗಳು ಖಾಲಿ ಇವೆ. ಆದರೆ, ಅನುಕಂಪದ ಆಧಾರಿತ ಆಕಾಂಕ್ಷಿಗಳು ಈ ಹುದ್ದೆಗಳನ್ನು ಆಯ್ಕೆ ಮಾಡಿಕೊಳ್ಳುತ್ತಿಲ್ಲ. ಕಿರಿಯ ಸಹಾಯಕ ಕಂ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗೆ ನೇಮಕಾತಿ ಬಯಸುತ್ತಿದ್ದಾರೆ. ಇದರಿಂದಾಗಿ ಹೆಚ್ಚಿನ ಸಂಖ್ಯೆಯಲ್ಲಿ ನೇಮಕಾತಿ ಮಾಡಲು ಸಾಧ್ಯವಾಗುತ್ತಿಲ್ಲ. ಪ್ರಸ್ತುತ ಖಾಲಿ ಇರುವ 23 ಕರ್ನಾಟಕ ರಾಜ್ಯ ಸಾರಿಗೆ ಕಾನ್‌ಸ್ಟೆಬಲ್‌ ಹುದ್ದೆಗಳಿಗೆ ಅನುಕಂಪದ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಸಾರಿಗೆ ಇಲಾಖೆ ಕಾರ್ಯದರ್ಶಿ ಎನ್‌.ವಿ. ಪ್ರಸಾದ್‌, ಕೆಕೆಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ರಾಚಪ್ಪ ಎಂ., ಮುಖ್ಯ ಸಿಬ್ಬಂದಿ ವ್ಯವಸ್ಥಾಪಕ ಆನಂದ ಬಂದ್ರಕಳ್ಳಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT