ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಸ್ಯಗಳ ಔಷಧ ಗುಣ ತಿಳಿಯಿರಿ: ಡಾ.ಲಿಂಗರಾಜ ಗಾಂಧಿ

Last Updated 13 ಜುಲೈ 2022, 19:16 IST
ಅಕ್ಷರ ಗಾತ್ರ

ಬೆಂಗಳೂರು: ‘ಸಸ್ಯಗಳಲ್ಲಿನ ಬಹು ಔಷಧ ಗುಣಗಳ ಮಹತ್ವ ತಿಳಿದುಕೊಳ್ಳುವ ಅಗತ್ಯವಿದೆ’ ಎಂದು ಬೆಂಗಳೂರು ನಗರ ವಿಶ್ವವಿದ್ಯಾಲಯದ ಕುಲಪತಿ ಡಾ.ಲಿಂಗರಾಜ ಗಾಂಧಿ ಹೇಳಿದರು.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಬೆಂಗಳೂರು ನಗರ ವಿಶ್ವವಿದ್ಯಾಲಯದ(ಬಿಸಿಯು) ಸಸ್ಯ ವಿಜ್ಞಾನ ವಿಭಾಗ, ಕರ್ನಾಟಕ ರಾಜ್ಯ ಔಷಧಿ ಗಿಡ ಮೂಲಿಕಾ ಪ್ರಾಧಿಕಾರ ಮತ್ತುಕರ್ನಾಟಕ ಜೀವವೈವಿಧ್ಯ ಮಂಡಳಿಯ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ‘ಸ್ಥಳೀಯ ಔಷಧೀಯ ಸಸ್ಯಗಳ ಸಂರಕ್ಷಣೆ’
ಕಾರ್ಯಗಾರದಲ್ಲಿ ಅವರು ಮಾತನಾಡಿದರು.

‘ವಿದ್ಯಾರ್ಥಿಗಳು ಪ್ರಸ್ತುತ ಹಣಕಾಸು, ವ್ಯವಹಾರಕ್ಕೆ ಸಂಬಂಧಿಸಿದಂತೆ ವಿವಿಧ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಂಡು ಅಧ್ಯಯನ ಮಾಡುತ್ತಿದ್ದಾರೆ. ಆದರೆ, ಔಷಧಿ ಸಸ್ಯಗಳ ಕುರಿತು ಅಧ್ಯಯನ ಮಾಡಲು ಆಸಕ್ತಿ ತೋರಿಸುತ್ತಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯ ಔಷಧಿ ಗಿಡ ಮೂಲಿಕಾ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುದರ್ಶನ್.ಜಿ.ಎ ಮಾತನಾಡಿ, ‘ದೈನಂದಿನ ಜೀವನದಲ್ಲಿ ಔಷಧೀಯ ಸಸ್ಯಗಳ ಬಳಕೆ ಮಾಡಲಾಗುತ್ತದೆ. ಆಯರ್ವೇದ, ಯುನಾನಿ ಮತ್ತು ಸಿದ್ಧ ಸೇರಿದಂತೆ ವಿವಿಧ ಸಾಂಪ್ರದಾಯಿಕ ವೈದ್ಯಕೀಯ ಪದ್ದತಿಗಳಲ್ಲಿ ಇವುಗಳ ಬಳಕೆ ಹೆಚ್ಚಿನ ಪ್ರಮಾಣದಲ್ಲಿ ಮಾಡಲಾಗುತ್ತದೆ’ ಎಂದು ಮಾಹಿತಿ ನೀಡಿದರು.

ಕರ್ನಾಟಕ ಜೀವವೈವಿಧ್ಯ ಮಂಡಳಿಯ ಸದಸ್ಯೆ ಅನಿತಾ ಎಸ್ ಅರೇಕಲ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT