ಬೆಂಗಳೂರು: ಪದವೀಧರರು ತಾವು ಪಡೆದ ಜ್ಞಾನವನ್ನು ಮನುಕುಲದ ಒಳಿತಿಗೆ, ಸಮಾಜ ಸೇವೆಗೆ ಮುಡುಪಾಗಿಡಬೇಕು ಎಂದು ಹಣಕಾಸು ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ಕುಮಾರ್ ಸಿಂಗ್ ಹೇಳಿದರು.

ಅಮೃತ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಎಂಜಿನಿಯರಿಂಗ್, ಮ್ಯಾನೇಜ್ಮಂಟ್, ತಂತ್ರಜ್ಞಾನ ಮತ್ತು ಸಂಶೋಧನಾ ವಿಭಾಗದ ವಿದ್ಯಾರ್ಥಿಗಳ ಪದವಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟಗಾರ ದೇಶಭಕ್ತಿ, ಸೇವಾ ಮನೋಭಾವವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ಅವರಿಂದ ಸದಾ ಪ್ರೇರಣೆ ಪಡೆಯಬೇಕು. ಆಗ ಕಲಿತ ಜ್ಞಾನ ಸಾರ್ಥಕವಾಗುತ್ತದೆ ಎಂದು ಕಿವಿಮಾತು ಹೇಳಿದರು.

ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ಅಧ್ಯಕ್ಷ ಟಿ.ಜಿ.ಸೀತಾರಾಮ್ ಮಾತನಾಡಿ, ‘ಶಿಕ್ಷಣ ಪೂರೈಸಿದ ವಿದ್ಯಾರ್ಥಿಗಳು ಸಮಾಜ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ತೊಡಗಿಸಿಕೊಳ್ಳಬೇಕು. ವೇಗವಾಗಿ ಬದಲಾಗುತ್ತಿರುವ ಜಗತ್ತಿನ ತಂತ್ರಜ್ಞಾನ ಬಳಸಿಕೊಂಡು ಸಮಾನತೆ, ಸುಸ್ಥಿರ ಅಭಿವೃದ್ಧಿ ಮತ್ತು ಜೀವನಮಟ್ಟ ಸುಧಾರಿಸಲು ಶ್ರಮಿಸಬೇಕು’ ಎಂದರು.

ಸ್ವಾಮಿ ರಾಮಕೃಷ್ಣಾನಂದಪುರಿ ಅವರು, 21 ಚಿನ್ನದ ಪದಕ ಒಳಗೊಂಡು 778 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು. ಬಿ.ಟೆಕ್ನಲ್ಲಿ 595, ಎಂ.ಬಿ.ಎನಲ್ಲಿ 99, ಎಂ.ಟೆಕ್ನಲ್ಲಿ 74 ವಿದ್ಯಾರ್ಥಿಗಳು ಪದವಿ ಪ್ರಮಾಣಪತ್ರ, 10 ಮಂದಿ ಪಿಎಚ್.ಡಿ ಪ್ರಮಾಣಪತ್ರ ಪಡೆದರು.

ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ನಿರ್ದೇಶಕ ಮನೋಜ್ ಪಿ, ಎಂಜಿನಿಯರಿಂಗ್ ಕಾಲೇಜು ಪ್ರಾಂಶುಪಾಲ ಶ್ರೀರಾಮ ದೇವನಾಥನ್, ಇ.ಗೋಪಾಲಕೃಷ್ಣನ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.