ಗೌರಿ ಹಂತಕರ ವಿರುದ್ಧ ‘ಕೋಕಾ’ ಅಸ್ತ್ರ

7

ಗೌರಿ ಹಂತಕರ ವಿರುದ್ಧ ‘ಕೋಕಾ’ ಅಸ್ತ್ರ

Published:
Updated:

ಬೆಂಗಳೂರು: ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳ ವಿರುದ್ಧ ಎಸ್‌ಐಟಿ ಅಧಿಕಾರಿಗಳು ಮಂಗಳವಾರ ಕೋಕಾ (ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯ್ದೆ) ಅಸ್ತ್ರ ಪ್ರಯೋಗಿಸಿದ್ದಾರೆ.

‘ಕೋಕಾ ಅಡಿ ಪ್ರಕರಣ ದಾಖಲಿಸಬೇಕಾದರೆ, ಆರೋಪಿಗಳ ವಿರುದ್ಧ ಕನಿಷ್ಠ ಎರಡು ಪ್ರಕರಣಗಳಾದರೂ ದಾಖಲಾಗಿರಬೇಕು. ಗೌರಿ ಹತ್ಯೆ ಹಾಗೂ ಸಾಹಿತಿ ಕೆ.ಎಸ್.ಭಗವಾನ್ ಹತ್ಯೆಗೆ ಯತ್ನಿಸಿದ ಆರೋಪಗಳು ಈ ಜಾಲದ ಮೇಲಿವೆ. ಈ ಅಂಶಗಳನ್ನು ನ್ಯಾಯಾಲಯದ ಗಮನಕ್ಕೆ ತಂದು, ಕೋಕಾ ‍ಪ್ರಯೋಗಿಸಿದ್ದೇವೆ’ ಎಂದು ಎಸ್‌ಐಟಿ ಅಧಿಕಾರಿಗಳು ತಿಳಿಸಿದ್ದಾರೆ.

ಐದನೇ ಪ್ರಕರಣ: ಬೆಂಗಳೂರಿನ ಕೆ.ಆರ್.ಪುರದಲ್ಲಿ ಪಾಲಿಕೆ ಸದಸ್ಯೆ ಮಂಜುಳಾ ದೇವಿ ಅವರ ಪತಿ ಸಿರಪುರ ಶ್ರೀನಿವಾಸ್ ಅವರನ್ನು ಹತ್ಯೆಗೈದ 12 ಆರೋಪಿಗಳ ವಿರುದ್ಧ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು 2014ರಲ್ಲಿ ಮೊದಲ ಸಲ ಕೋಕಾ ಪ್ರಯೋಗಿಸಿದ್ದರು.

ಆ ನಂತರ ಶಿವಮೊಗ್ಗದಲ್ಲಿ ಕುಖ್ಯಾತ ಪಾತಕಿ ಬನ್ನಂಜೆ ರಾಜನ ವಿರುದ್ಧ, ಮಂಗಳೂರಿನಲ್ಲಿ ನಾಯಕ್ ಕೊಲೆ ಪ್ರಕರಣದ ಆರೋಪಿಗಳ ವಿರುದ್ಧ ಹಾಗೂ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ಜಾಲದ ವಿರುದ್ಧ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು.

**

ಕೋಕಾ ಮಹತ್ವವೇನು?

* ಪ್ರಾಸಿಕ್ಯೂಷನ್ ಹಾಗೂ ತನಿಖಾ ಸಂಸ್ಥೆಗಳು ಆಕ್ಷೇಪಣೆ ಸಲ್ಲಿಸಿದ ನಂತರವೇ ನ್ಯಾಯಾಲಯ ಆರೋಪಿಗಳ ಜಾಮೀನು ಅರ್ಜಿಗಳನ್ನು ಪರಿಗಣಿಸಬೇಕು.

* ಇತರೆ ಪ್ರಕರಣಗಳಲ್ಲಿ ಆರೋಪಿಗಳನ್ನು ಬಂಧಿಸಿದ 90 ದಿನಗಳಲ್ಲಿ ಆರೋಪಪಟ್ಟಿ ಸಲ್ಲಿಸಬೇಕು. ಕೋಕಾ ಪ್ರಕರಣಗಳಲ್ಲಿ ಆರೋಪಪಟ್ಟಿ ಸಲ್ಲಿಕೆಗೆ 180 ದಿನಗಳವರೆಗೆ ಕಾಲಾವಕಾಶವಿರುತ್ತದೆ.

* ಪ್ರಧಾನ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಷ್ಟೇ ವಿಚಾರಣೆ.

* ಆರೋಪಿಗಳ ಆಸ್ತಿಯನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಲು ಅವಕಾಶವಿದೆ.

* ಪೊಲೀಸ್ ಕಸ್ಟಡಿ ಅವಧಿಯನ್ನು 15 ದಿನಗಳಿಂದ ತಿಂಗಳವರೆಗೆ ವಿಸ್ತರಣೆ ಮಾಡಬಹುದು.

ಬರಹ ಇಷ್ಟವಾಯಿತೆ?

  • 18

    Happy
  • 1

    Amused
  • 1

    Sad
  • 0

    Frustrated
  • 2

    Angry

Comments:

0 comments

Write the first review for this !