ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಲಹಂಕ: ಕೋದಂಡರಾಮಸ್ವಾಮಿ ಬ್ರಹ್ಮರಥೋತ್ಸವ

Published 20 ಏಪ್ರಿಲ್ 2024, 14:18 IST
Last Updated 20 ಏಪ್ರಿಲ್ 2024, 14:18 IST
ಅಕ್ಷರ ಗಾತ್ರ

ಯಲಹಂಕ: ಬಳ್ಳಾರಿ ರಸ್ತೆಯ ಬ್ಯಾಟರಾಯನಪುರದಲ್ಲಿ ಕೋದಂಡರಾಮಸ್ವಾಮಿಯ 75ನೇ ವರ್ಷದ ಬ್ರಹ್ಮರಥೋತ್ಸವ ವಿಜೃಂಭಣೆಯಿಂದ ನಡೆಯಿತು.

ಬೆಳಿಗ್ಗೆಯಿಂದಲೇ ಸ್ವಾಮಿಗೆ ಅಭಿಷೇಕ ಅರ್ಚನೆ, ಮಹಾನಿವೇದನೆ, ಹೋಮ, ಮಹಾಮಂಗಳಾರತಿ ಪೂಜಾಕೈಂಕರ್ಯ ನಡೆಯಿತು.  ಬಳಿಕ ಭಕ್ತರು ‘ಗೋವಿಂದ–ಗೋವಿಂದ’ ಘೋಷಗಳೊಂದಿಗೆ ಸಂಜೆ 4 ಗಂಟೆಗೆ ರಥವನ್ನು ಎಳೆಯಲಾಯಿತು.

ಸುತ್ತಮುತ್ತಲ ಗ್ರಾಮಗಳು, ಬೆಂಗಳೂರು ನಗರ ಸೇರಿ ವಿವಿಧ ಜಿಲ್ಲೆಗಳಿಂದ ಅಪಾರ ಸಂಖ್ಯೆಯಲ್ಲಿ ಬಂದಿದ್ದ ಭಕ್ತರು ಸ್ವಾಮಿಯ ದರ್ಶನ ಪಡೆದರು. ಬಾಳೆಹಣ್ಣು ಮತ್ತು ದವನವನ್ನು ರಥದ ಮೇಲೆ ಎಸೆಯುವ ಮೂಲಕ ಹರಕೆ ತೀರಿಸಿದರು.

ಗ್ರಾಮದೇವತೆಗಳಾದ ದೊಡ್ಡಮ್ಮ ಮತ್ತು ಮಹೇಶ್ವರಮ್ಮ ದೇವಿಗೆ ಇದೇ ವೇಳೆ ವಿಶೇಷಪೂಜೆ ನೆರವೇರಿಸಲಾಯಿತು. ಕೋಸಂಬರಿ, ಪಾನಕ ಮತ್ತು ಮಜ್ಜಿಗೆ ವಿತರಣೆಯ ಜೊತೆಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT