ಕೆ.ಆರ್.ಪುರ: ತೆರೆದ ಚರಂಡಿಯ ದುರ್ನಾತ, ರಸ್ತೆ ಬದಿ ತ್ಯಾಜ್ಯದ ರಾಶಿ, ರಸ್ತೆ ಮೇಲೆ ಹರಿಯುವ ಮಳೆ ನೀರು, ಗುಂಡಿಮಯ ರಸ್ತೆಗಳು, ಸಾರ್ವಜನಿಕ ಶೌಚಾಲಯ ಕೊರತೆ, ಮೂಲ ಸೌಲಭ್ಯ ವಂಚಿತ ಬಸ್ ನಿಲ್ದಾಣ...

ಇದು ಬೆಂಗಳೂರು ಪೂರ್ವ ತಾಲ್ಲೂಕಿನ ಮಹದೇವಪುರ ಕ್ಷೇತ್ರದ ಹೂಡಿ ವಾರ್ಡ್ನ ಕೊಡಿಗೇಹಳ್ಳಿ ಗ್ರಾಮದ ಸ್ಥಿತಿ. ಮೂಲ ಸೌಲಭ್ಯಗಳ ಕೊರತೆಯಿಂದ ಗ್ರಾಮದ ನಿವಾಸಿಗಳು ತೊಂದರೆ ಪಡುತ್ತಿದ್ದಾರೆ.

ಕೊಡಿಗೇಹಳ್ಳಿ ಗ್ರಾಮ ಒಂದೆಡೆಗೆ ಕೆ.ಆರ್.ಪುರ ವಿಧಾನ ಸಭಾ ಕ್ಷೇತ್ರ ಇನ್ನೊಂದೆಡೆಗೆ ಮಹದೇವಪುರ ಕ್ಷೇತ್ರದ ಅಂಚಿನಲ್ಲಿದ್ದು, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಐ.ಟಿ ಕ್ಷೇತ್ರ, ಖಾಸಗಿ ಶಾಲೆಗಳು, ರಿಯಲ್ ಎಸ್ಟೇಟ್ ಉದ್ಯಮ ಆವರಿಸಿಕೊಂಡಿದೆ.

ಕೊಡಿಗೇಹಳ್ಳಿ ಗ್ರಾಮದಲ್ಲಿ ಅಭಿವೃದ್ಧಿ ಕುಂಠಿತಗೊಂಡಿದೆ. ಈಗ ಹೂಡಿ ವಾರ್ಡ್ಗೆ ಸೇರಿಸಿದ್ದರೂ ಇಲ್ಲಿಯವರೆಗೆ ಯಾವುದೇ ಶಾಶ್ವತ ಯೋಜನೆ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

‘ಒಳಚರಂಡಿ ವ್ಯವಸ್ಥೆ ಸರಿಯಿಲ್ಲ. ಹೂಳು ತುಂಬಿಕೊಂಡು ನೀರು ಸರಾಗವಾಗಿ ಹರಿಯುತ್ತಿಲ್ಲ. ಕೊಳಚೆ ನೀರು ರಸ್ತೆ ಮೇಲೆ ಹರಿಯುತ್ತದೆ. ಸೊಳ್ಳೆಗಳ ಆವಾಸ ಸ್ಥಾನವಾಗಿದೆ. ಬಿಬಿಎಂಪಿ ಸಿಬ್ಬಂದಿ ಕಸಕ್ಕೆ ಬೆಂಕಿ ಹಾಕುವುದರಿಂದ ತ್ಯಾಜ್ಯದ ಹೊಗೆಯಿಂದ ಜನರು ಉಸಿರಾಟ ಸಮಸ್ಯೆ ಎದುರಿಸುತ್ತಿದ್ದಾರೆ’ ಎಂದು ಗ್ರಾಮದ ಮುಖಂಡ ವಿ.ವಿವೇಕ್ ದೂರಿದರು

‘ಕೊಡಿಗೇಹಳ್ಳಿ- ಕುರುಡುಸೊಣ್ಣೆನಹಳ್ಳಿ ಮುಖ್ಯರಸ್ತೆ ಗುಂಡಿಮಯವಾಗಿದೆ. ವಾಹನಗಳು ಹದಗೆಟ್ಟ ರಸ್ತೆಯಲ್ಲಿ ಸಾಗಬೇಕು. ಹಲವು ಬಾರಿ ಅಪಘಾತಗಳು ಸಂಭವಿಸಿವೆ. ರಸ್ತೆ ಕಾಮಗಾರಿಗೆ ಪೂಜೆ ಮಾಡಲಾಗಿದೆ. ಯಾವುದೇ ಕೆಲಸವಾಗಿಲ್ಲ. ಮೂಲಭೂತ ಸೌಕರ್ಯಗಳ ಕೊರತೆಯಿಂದ ಜನಜೀವನ ದುಸ್ತರವಾಗಿದೆ. ಸಮಸ್ಯೆ ಸರಿಪಡಿಸದಿದ್ದರೆ ಅಧಿಕಾರಿಗಳ ವಿರುದ್ಧದ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ ಹೋರಾಟ ಮಾಡಲಾಗುವುದು’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ರಸ್ತೆ, ಚರಂಡಿ, ಬಸ್ ನಿಲ್ದಾಣ, ಶೌಚಾಲಯ ಕೊರತೆ ಗ್ರಾಮದಲ್ಲಿ ಎದ್ದು ಕಾಣುತ್ತಿದೆ. ಅಧಿಕಾರಿಗಳು, ಜನಪ್ರತಿನಿಧಿಗಳು ಇದರ ಬಗ್ಗೆ ಗಮನ ಹರಿಸುತ್ತಿಲ್ಲ. ಜಿಬಿಎ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ’ ಎಂದು ಗ್ರಾಮದ ನಿವಾಸಿ ಪ್ರಶಾಂತ್ ಕುಮಾರ್ ಟಿ.ಎಸ್ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.