ಬೆಂಗಳೂರು: ‘ಯಲಹಂಕ ವ್ಯಾಪ್ತಿಯ ಕೋಗಿಲು ಲೇಔಟ್ನ ಫಕೀರ್ ಹಾಗೂ ವಸೀಂ ಕಾಲೊನಿಯಲ್ಲಿ ಯಾವುದೇ ವ್ಯಕ್ತಿಗೆ ನಿವೇಶನ ಮಂಜೂರಾಗಿರುವ ಬಗ್ಗೆ ದಾಖಲೆಗಳಿಲ್ಲ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ಸ್ಪಷ್ಟಪಡಿಸಿದೆ.

‘ತೆರವು ಕಾರ್ಯಾಚರಣೆಯನ್ನು ಅಸಾಂವಿಧಾನಿಕ ಎಂದು ಘೋಷಿಸಬೇಕು, ಸಂತ್ರಸ್ತರಿಗೆ ಪುನರ್ವಸತಿ ಹಾಗೂ ಪರಿಹಾರ ನೀಡಲು ನಿರ್ದೇಶಿಸಬೇಕು’ ಎಂದು ಕೋರಿ ಈ ಪ್ರದೇಶದಲ್ಲಿ ವಾಸವಿದ್ದ ಝೈಬಾ ತಬಸ್ಸುಮ್, ರೆಹಾನ ಮತ್ತು ಅರೀಫಾ ಬೇಗಂ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ‘ನಾಲ್ಕು ಪುನರ್ವಸತಿ ಕೇಂದ್ರಗಳನ್ನು ಮುಚ್ಚಲಾಗಿದೆ. ಸಂಪರ್ಕ ಸಂಖ್ಯೆಯೂ ಸರಿಯಾಗಿಲ್ಲ. ಜಿಬಿಎಗೆ ತೆರವು ಕಾರ್ಯಾಚರಣೆ ನಡೆಸುವ ಅಧಿಕಾರವಿಲ್ಲ’ ಎಂದು ಆಕ್ಷೇಪಿಸಿದರು.

ಇದಕ್ಕೆ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ ಶೆಟ್ಟಿ, ‘ವಸೀಂ ಹಾಗೂ ಫಕೀರ್ ಕಾಲೊನಿಗಳಲ್ಲಿ ಯಾವುದೇ ವ್ಯಕ್ತಿಯ ನಿವೇಶನಕ್ಕೆ ಸಂಬಂಧಿಸಿದಂತೆ ತಾತ್ಕಾಲಿಕ ಹಕ್ಕು ಪತ್ರ ನೀಡಲಾಗಿಲ್ಲ. ಕೋಗಿಲು ಬಡಾವಣೆಯ ಹೊರಗೆ ಮೂವರಿಗೆ ತಾತ್ಕಾಲಿಕ ನಿವೇಶನದ ಹಕ್ಕುಪತ್ರ ನೀಡಿರುವ ಮಾಹಿತಿ ಇದೆ. ಅದೂ ಷರತ್ತಿಗೆ ಒಳಪಟ್ಟಿದೆ. ಇನ್ನೂ ನಾಲ್ಕು ಮಂದಿಯ ಬಗ್ಗೆ ಯಾವುದೇ ಮಾಹಿತಿ ಇಲ್ಲ. ತೆರವು ಕಾರ್ಯಾಚರಣೆಯಲ್ಲಿ 167 ಮಂದಿ ಸಂತ್ರಸ್ತರಾಗಿದ್ದಾರೆ. ನಾಲ್ಕು ಸ್ಥಳಗಳಲ್ಲಿ ಪುನರ್ವಸತಿ ಕಲ್ಪಿಸಲಾಗಿದೆ. ಅಲ್ಲಿಗೆ ಯಾರೂ ಬರುತ್ತಿಲ್ಲ’ ಎಂದು ವಿವರಿಸಿದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಪ್ರಕರಣದಲ್ಲಿ ವಕೀಲೆ ಬಿ.ವಿ.ವಿದ್ಯುಲ್ಲತಾ ಅವರನ್ನು ಅಮಿಕಸ್ ಕ್ಯೂರಿಯನ್ನಾಗಿ (ನ್ಯಾಯಾಲಯಕ್ಕೆ ನೆರವಾಗುವ ವಕೀಲರು) ನೇಮಿಸಿ ಆದೇಶಿಸಿತು. ಅಂತೆಯೇ, ‘ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ಸಂತ್ರಸ್ತರ ಪುನರ್ವಸತಿಗೆ ಸಂಬಂಧಿಸಿದಂತೆ ವರದಿ ನೀಡಬೇಕು ಹಾಗೂ ಅಮಿಕಸ್ ಕ್ಯೂರಿಗೆ ನೆರವಾಗಬೇಕು’ ಎಂದು ನಿರ್ದೇಶಿಸಿ ವಿಚಾರಣೆ ಮುಂದೂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.