ಬೆಂಗಳೂರು: ‘ಕೋಗಿಲು ಬಡಾವಣೆಯಲ್ಲಿನ ಅಕ್ರಮ ಮನೆಗಳ ತೆರವು ಕಾರ್ಯಾಚರಣೆಯಲ್ಲಿ ಸಂತ್ರಸ್ತರಿಗೆ ಕಲ್ಪಿಸಲಾಗಿರುವ ಪುನರ್ವಸತಿ ಹಾಗೂ ನಿರ್ಗತಿಕರಾದವರ ಮಾಹಿತಿಯನ್ನು ಒಳಗೊಂಡ ಅಂತಿಮ ವರದಿ ಸಲ್ಲಿಸಲು ಪ್ರಕರಣದ ಅಮಿಕಸ್ ಕ್ಯೂರಿಗೆ ಏಪ್ರಿಲ್ 29ರವರೆಗೆ ಹೈಕೋರ್ಟ್ ಕಾಲಾವಕಾಶ ನೀಡಿದೆ.

‘ತೆರವು ಕಾರ್ಯಾಚರಣೆಯನ್ನು ಅಸಾಂವಿಧಾನಿಕ ಎಂದು ಘೋಷಿಸಬೇಕು, ಸಂತ್ರಸ್ತರಿಗೆ ಪುನರ್ವಸತಿ ಹಾಗೂ ಪರಿಹಾರ ನೀಡಲು ನಿರ್ದೇಶಿಸಬೇಕು’ ಎಂದು ಕೋರಿ ಈ ಪ್ರದೇಶದಲ್ಲಿ ವಾಸವಿದ್ದ ಝೈಬಾ ತಬಸ್ಸುಮ್, ರೆಹಾನ ಮತ್ತು ಅರೀಫಾ ಬೇಗಂ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅಮಿಕಸ್ ಕ್ಯೂರಿ ಬಿ.ವಿ.ವಿದ್ಯುಲ್ಲತಾ, ‘ಪುನರ್ವಸತಿ ಕೇಂದ್ರಕ್ಕೆ ಭೇಟಿ ನೀಡಿದ್ದೆ. ಆದರೆ, ನಿರಾಶ್ರಿತರು ತಾವಿದ್ದ ಜಾಗ ತೊರೆದು ಪುನರ್ವಸತಿ ಕೇಂದ್ರಕ್ಕೆ ಹೋಗಲು ಇಷ್ಟಪಡುತ್ತಿಲ್ಲ. ಬಡಾವಣೆಯಲ್ಲಿಯೇ ಉಳಿದುಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ಅಂತಿಮ ವರದಿಯನ್ನು ಎರಡು-ಮೂರು ವಾರಗಳಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು’ ಎಂದು ವಿವರಿಸಿದರು.

ಇದನ್ನು ಪರಿಗಣಿಸಿದ ನ್ಯಾಯಪೀಠ, ಪುನರ್ವಸತಿ ವ್ಯವಸ್ಥೆ ಕುರಿತಾದ ಅಂತಿಮ ವರದಿ ಸಲ್ಲಿಕೆಗೆ ಏಪ್ರಿಲ್ 29ರವರೆಗೆ ಗಡುವು ನೀಡಿ ವಿಚಾರಣೆ ಮುಂದೂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.