ಬೆಂಗಳೂರು: ‘ಯಲಹಂಕ ಸಮೀಪದ ಕೋಗಿಲು ಬಡಾವಣೆಯ ನಿವಾಸಿಗಳಿಗೆ ಮೂಲಸೌಕರ್ಯ ಒದಗಿಸುವ ಜೊತೆಗೆ ಪುನರ್ವಸತಿ ಕಲ್ಪಿಸಬೇಕು’ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಒತ್ತಾಯಿಸಿದ್ದಾರೆ.

ಮಂಗಳವಾರ ಕೋಗಿಲು ಬಡಾವಣೆಗೆ ಭೇಟಿ ನೀಡಿದ ಅವರು ಸ್ಥಳೀಯರ ಆಹವಾಲು ಸ್ವೀಕರಿಸಿದರು. ‘ಸೂರು ಕಳೆದುಕೊಂಡ ಎಲ್ಲರಿಗೂ ಮೂಲಸೌಲಭ್ಯ ಕಲ್ಪಿಸಬೇಕು’ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಈ ಬಗ್ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿರುವ ಅವರು, ‘ಕೋಗಿಲು ಬಡಾವಣೆಯ ಐದು ಎಕರೆ ಪ್ರದೇಶದಲ್ಲಿ ವಾಸಿಸುತ್ತಿದ್ದ ನಿವಾಸಿಗಳ ಮನೆ ಹಾಗೂ ಶೆಡ್ಗಳನ್ನು ಜಿಬಿಎ ಹಾಗೂ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆಯಿಂದ ತೆರವುಗೊಳಿಸಲಾಗಿದೆ. ಇದರಿಂದ 200ಕ್ಕೂ ಹೆಚ್ಚು ಕುಟುಂಬಗಳು ಬೀದಿಗೆ ಬಿದ್ದಿವೆ. ಮಹಿಳೆಯರು, ಅಂಗವಿಕಲರು, ಮಕ್ಕಳು ಮತ್ತು ವೃದ್ಧರು ಕೃತಕ ಟೆಂಟ್ಗಳನ್ನು ನಿರ್ಮಿಸಿಕೊಂಡು ವಾಸಿಸುತ್ತಿದ್ದಾರೆ’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

‘ಬೆಂಗಳೂರು ನಗರದಲ್ಲಿ ಚಳಿ ತೀವ್ರತೆ ಹೆಚ್ಚಿದ್ದು, ಮಹಿಳೆಯರು, ಮಕ್ಕಳು ಹಾಗೂ ವೃದ್ಧರು ಮನೆಗಳಿಲ್ಲದೇ ಬಯಲು ಪ್ರದೇಶದಲ್ಲಿ ಜೀವನ ನಿರ್ವಹಿಸುತ್ತಿದ್ದಾರೆ. ಇವರಿಗೆ ಶುದ್ಧ ಕುಡಿಯುವ ನೀರು, ಆಹಾರ ಹಾಗೂ ಶೌಚಾಲಯ ಸೇರಿದಂತೆ ಮೂಲಸೌಕರ್ಯಗಳನ್ನು ನೀಡಬೇಕು. ಮಹಿಳೆಯರು ಹಾಗೂ ಮಕ್ಕಳಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಈ ಕುಟುಂಬಗಳಿಗೆ ತಾತ್ಕಾಲಿಕವಾಗಿ ಪುನರ್ವಸತಿ ಕಲ್ಪಿಸಬೇಕು. ಮುಂದಿನ ದಿನಗಳಲ್ಲಿ ಶಾಶ್ವತ ವಸತಿ ಸೌಲಭ್ಯ ಒದಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.