ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ವಿಶ್ವವಿದ್ಯಾಲಯದ ಕೊಕ್ಕೊ: ವಿಜಯನಗರ ಎಫ್‌.ಜಿ.ಸಿ. ಚಾಂಪಿಯನ್

Published 10 ಡಿಸೆಂಬರ್ 2023, 20:16 IST
Last Updated 10 ಡಿಸೆಂಬರ್ 2023, 20:16 IST
ಅಕ್ಷರ ಗಾತ್ರ

ಕೆಂಗೇರಿ: ಬೆಂಗಳೂರು ವಿಶ್ವವಿದ್ಯಾಲಯದ ಅಂತರ ಕಾಲೇಜು ಪುರುಷರ ಕೊಕ್ಕೊ ಪಂದ್ಯಾವಳಿಯಲ್ಲಿ ವಿಜಯನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತಂಡವು ಚಾಂಪಿಯನ್ ಆಗಿದೆ.

2023–24ನೇ ಸಾಲಿನ ಬೆಂಗಳೂರು ವಿಶ್ವವಿದ್ಯಾಲಯದ ಅಂತರ್ ಕಾಲೇಜು ಪುರುಷರ ಕೊಕ್ಕೊ ಪಂದ್ಯಾವಳಿಯನ್ನು ಯುಸಿಪಿಇ ಕಾಲೇಜಿನ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿತ್ತು. ಈ ಪಂದ್ಯಾವಳಿಯಲ್ಲಿ 28 ಪದವಿ ಕಾಲೇಜುಗಳ ತಂಡಗಳು ಭಾಗವಹಿಸಿದ್ದವು.

ವಿಜಯನಗರ ಕಾಲೇಜು ತಂಡವು ಸೆಮಿಫೈನಲ್ ಪಂದ್ಯದಲ್ಲಿ ಬಿಪಿಎಡ್ ಕಾಲೇಜು ತಂಡದ ವಿರುದ್ಧ ಜಯಗಳಿಸಿತ್ತು. ಅಂತಿಮ ಪಂದ್ಯದಲ್ಲಿ ನೆಲಮಂಗಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಾಲೇಜು ತಂಡದ ವಿರುದ್ಧ 15 ಅಂಕ ಪಡೆದು ಚಾಂಪಿಯನ್‌ ಆಗಿ ಹೊರಹೊಮ್ಮಿತು

ಬೆಂಗಳೂರು ವಿಶ್ವ ವಿದ್ಯಾಲಯದ ರಾಮಕೃಷ್ಣಯ್ಯ, ಅಮರನಾಥ್, ಪಿ.ಸಿ. ಕೃಷ್ಣಸ್ವಾಮಿ ವಿಜೇತ ತಂಡಗಳಿಗೆ ಪದಕ ಮತ್ತು ಟ್ರೋಫಿಯನ್ನು ನೀಡಿ ಗೌರವಿಸಿದರು. ವಿಜಯನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಈಶ್ವರ್ ನಾಯ್ಕ್ ಮತ್ತು ಶ್ರೀನಿವಾಸ್ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT