ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಸಮಾವೇಶವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಉದ್ಘಾಟಿಸುತ್ತಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸರ್ಕಾರದ ವಿವಿಧ ಸಚಿವರು ಭಾಗವಹಿಸುತ್ತಾರೆ. ಈ ಸಮಾವೇಶಕ್ಕೂ ಮುನ್ನ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪೂರ್ವಭಾವಿ ಸಭೆಗಳನ್ನು ನಡೆಲಾಗುತ್ತಿದ್ದು, ಸಮಾಜವನ್ನು ಪರಿಣಾಮಕಾರಿಯಾಗಿ ಸಂಘಟನೆ ಮಾಡಲಾಗುತ್ತದೆ. ಕೋಲಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಸಮಾವೇಶದಲ್ಲಿ ನಿರ್ಣಯ ಅಂಗೀಕರಿಸಲಾಗುವುದು’ ಎಂದು ಹೇಳಿದರು.