ಬೆಂಗಳೂರು: ಕೊತ್ತನೂರಿನ ಸಮೃದ್ಧಿ ಅಪಾರ್ಟ್ಮೆಂಟ್ನ ಕಟ್ಟಡದಲ್ಲಿ ಅಸ್ಥಿಪಂಜರ ಪತ್ತೆಯಾಗಿದೆ. ಏಳು ತಿಂಗಳ ಹಿಂದೆ ಮೃತಪಟ್ಟಿರಬಹುದಾದ ವ್ಯಕ್ತಿಯ ಅಸ್ಥಿಪಂಜರ ಎಂದು ಅಂದಾಜಿಸಲಾಗಿದೆ.

35ರಿಂದ 40 ವರ್ಷದ ಪುರುಷನ ಅಸ್ಥಿಪಂಜರವೆಂದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಘಟನಾ ಸ್ಥಳಕ್ಕೆ ಸೋಕೊ ತಂಡದವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊತ್ತನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ವಿವಾದದ ಕಾರಣಕ್ಕೆ ಅಪಾರ್ಟ್ಮೆಂಟ್ ಕಾಮಗಾರಿ ಸ್ಥಗಿತಗೊಂಡಿತ್ತು. ವ್ಯಾಜ್ಯ ಬಗೆಹರಿದ ಕಾರಣಕ್ಕೆ ಒಂದು ತಿಂಗಳಿನಿಂದ ಕಟ್ಟಡ ಶುಚಿಗೊಳಿಸುವ ಕೆಲಸ ಆರಂಭವಾಗಿತ್ತು. ಗುರುವಾರ ಸಂಜೆ ಕಟ್ಟಡದ ನಾಲ್ಕನೇ ಮಹಡಿಯನ್ನು ಶುಚಿಗೊಳಿಸುತ್ತಿದ್ದ ಕಾರ್ಮಿಕರು ಅಸ್ಥಿಪಂಜರವನ್ನು ಗಮನಿಸಿದ್ದರು. ಕೂಡಲೇ ಅಪಾರ್ಟ್ಮೆಂಟ್ನ ಭದ್ರತಾ ಸಿಬ್ಬಂದಿ ಕೊತ್ತನೂರು ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಸದ್ಯ ಅಸ್ಥಿಪಂಜರವನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.