ಮಂಗಳವಾರ, ಜೂನ್ 28, 2022
25 °C

ವಚನಭ್ರಷ್ಟ ಬಿಜೆಪಿ ಸರ್ಕಾರ: ಆಂಜನೇಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ವಾಲ್ಮೀಕಿ ನಾಯಕ ಸಮುದಾಯಕ್ಕೆ ನ್ಯಾಯಯುತವಾಗಿ ಮೀಸಲಾತಿ ಹೆಚ್ಚಳ ಮಾಡುವುದಾಗಿ ಮಾತು ಕೊಟ್ಟಿದ್ದ ಬಿಜೆಪಿ, ಅಧಿಕಾರಕ್ಕೆ ಬಂದ ಬಳಿಕ ಅದನ್ನು ಈಡೇರಿಸದೇ ವಚನಭ್ರಷ್ಟವಾಗಿದೆ’ ಎಂದು ಕೆಪಿಸಿಸಿ ಉಪಾಧ್ಯಕ್ಷ ಎಚ್‌. ಆಂಜನೇಯ ದೂರಿದರು.

ಪರಿಶಿಷ್ಟರ ಮೀಸಲಾತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌.ನಾಗಮೂರ್ತಿ ಸಮಿತಿ ಸಲ್ಲಿಸಿರುವ ವರದಿ ಜಾರಿಗೆ ಒತ್ತಾಯಿಸಿ ಸ್ವಾತಂತ್ರ್ಯ ಉದ್ಯಾನದಲ್ಲಿ ಧರಣಿ ನಡೆಸುತ್ತಿರುವ ಪ್ರಸನ್ನಾನಂದ ಸ್ವಾಮೀಜಿ ಅವರನ್ನು ಅವರು ಭೇಟಿಯಾಗಿ ಮಾತನಾಡಿದರು.

ದಲಿತ ಸಂಘಟನೆಗಳು ನಗರದ ಮೈಸೂರು ಬ್ಯಾಂಕ್ ವೃತ್ತದಿಂದ ನಗರ ಜಿಲ್ಲಾಧಿಕಾರಿ ಕಚೇರಿವರೆಗೆ ಹಮ್ಮಿ
ಕೊಂಡಿದ್ದ ಮೆರವಣಿಗೆ ಹಾಗೂ ಬಹಿರಂಗ ಸಭೆಯಲ್ಲಿ ಭಾಗವಹಿಸಿದರು. ‘ವಾಲ್ಮೀಕಿ ಸ್ವಾಮೀಜಿ ಧರಣಿ ಆರಂಭಕ್ಕೆ ಮುಂದಾಗುತ್ತಿದ್ದಂತೆಯೇ ಅವರ ಮನವೊಲಿಸುವ ಸಣ್ಣ ಪ್ರಯತ್ನವನ್ನು ಮಾಡಲಿಲ್ಲ ಎಂದರು. ದಲಿತ ಮುಖಂಡರಾದ ಶ್ರೀಧರ್ ಕಲಿವೀರ್. ಎಂ.ವೆಂಕಟಸ್ವಾಮಿ, ಎನ್.ಮೂರ್ತಿ, ಮೋಹನ ನಾಗರಾಜ್, ಹೆಣ್ಣೂರು ಶ್ರೀನಿವಾಸ, ಮಾವಳ್ಳಿ ಶಂಕರ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು