ಭಾನುವಾರ, ನವೆಂಬರ್ 1, 2020
20 °C

ಕೊರೊನಾ ನಿರ್ವಹಣೆ: ರಾಜ್ಯ ಸರ್ಕಾರ ವಿಫಲವಾಗಿದೆ -ಸಲೀಂ ಅಹಮದ್‌ ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಕೊರೊನಾ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಪರೀಕ್ಷೆಗಳನ್ನು ಹೆಚ್ಚು ಮಾಡಿದರೆ ಹೆಚ್ಚು ಜನರಿಗೆ ಕೋವಿಡ್‌ ಇರುವುದು ಗೊತ್ತಾಗಲಿದೆ. ಇದರಿಂದ ಕೆಟ್ಟ ಹೆಸರು ಬರುತ್ತದೆ ಎಂದು ರಾಜ್ಯ ಸರ್ಕಾರ ಹೆಚ್ಚು ಪರೀಕ್ಷೆಗಳನ್ನು ಮಾಡುತ್ತಿಲ್ಲ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್‌ ಆರೋಪಿಸಿದರು.

ಕೆಪಿಸಿಸಿ ವತಿಯಿಂದ ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಜಲಗಂಗಮ್ಮ ಸಮುದಾಯ ಭವನದಲ್ಲಿ ಆಯೋಜಿಸಿದ್ದ ‘ಆರೋಗ್ಯ ಹಸ್ತ’ ಹಾಗೂ ಸ್ವಯಂ ಸೇವಕರಿಗೆ ಕೋವಿಡ್‌ ತಪಾಸಣೆ ಕುರಿತ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ವಿಧಾನಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ ಮಾತನಾಡಿ, ‘ಅಮೆರಿಕದಲ್ಲಿ 10 ಲಕ್ಷ ಜನರಲ್ಲಿ 1.15 ಲಕ್ಷ ಜನರಿಗೆ ಕೊರೊನಾ ಪರೀಕ್ಷೆ ಮಾಡಲಾಗುತ್ತಿದೆ. ಆದರೆ, ಭಾರತದಲ್ಲಿ ಕೇವಲ 11 ಸಾವಿರ ಜನರಿಗೆ ಪರೀಕ್ಷೆ ಮಾಡಲಾಗುತ್ತಿದೆ’ ಎಂದರು.

ಕಾಂಗ್ರೆಸ್‌ ಮುಖಂಡ ಕೆಂಗಲ್‌ ಶ್ರೀಪಾದ ರೇಣು ಮಾತನಾಡಿ, ‘ಮಲ್ಲೇಶ್ವರ ಕ್ಷೇತ್ರದ ವ್ಯಾಪ್ತಿಯಲ್ಲಿ 60 ಸ್ವಯಂ ಸೇವಕರು ಮನೆ ಮನೆಗೆ ತೆರಳಿ ಕೋವಿಡ್‌ ತಪಾಸಣೆ ನಡೆಸಲಿದ್ದು, ಅವರಿಗೆ ವೈದ್ಯರು ಅಗತ್ಯ ತರಬೇತಿ ನೀಡಲಿದ್ದಾರೆ’ ಎಂದರು. ಇದೇ ಸಂದರ್ಭದಲ್ಲಿ ಶ್ರೀಪಾದ ರೇಣು ‘ಆರೋಗ್ಯ ಹಸ್ತ’ ಕಾರ್ಯಕ್ರಮಕ್ಕೆ ₹ 2 ಲಕ್ಷ ದೇಣಿಗೆ ನೀಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು