ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

680 ಜನರ ಆರೋಗ್ಯ ತಪಾಸಣೆ

Last Updated 21 ಆಗಸ್ಟ್ 2021, 15:15 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ (ಕೆಪಿಸಿಸಿ) ವೈದ್ಯಕೀಯ ಘಟಕವು ಬಸವನಗುಡಿ ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಶಿಬಿರದಲ್ಲಿ ಒಟ್ಟು 680 ಮಂದಿಗೆ ಶನಿವಾರ ಉಚಿತವಾಗಿ ಆರೋಗ್ಯ ತಪಾಸಣೆ ಮಾಡಲಾಯಿತು.

ಬನಶಂಕರಿ 1ನೇ ಹಂತದ ಬ್ಯಾಂಕ್‌ ಕಾಲೊನಿ ಬಸ್‌ನಿಲ್ದಾಣದ ಹಿಂಭಾಗದಲ್ಲಿರುವ ಕೆಪಿಸಿಸಿ ಬೆಂಗಳೂರು ದಕ್ಷಿಣ ವಿಭಾಗದ ವೈದ್ಯಕೀಯ ಘಟಕದ ಕಚೇರಿ ಆವರಣದಲ್ಲಿ ಶಿಬಿರ ಆಯೋಜಿಸಲಾಗಿತ್ತು. ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೊ ಆಸ್ಪತ್ರೆ ಹಾಗೂ ಜೆ.ಪಿ ನಗರದ ಶೇಖರ್‌ ನೇತ್ರಾಲಯದ ಹಿರಿಯ ವೈದ್ಯರು ಇದರಲ್ಲಿ ಪಾಲ್ಗೊಂಡಿದ್ದರು.

ಶಿಬಿರದಲ್ಲಿ ಭಾಗವಹಿಸಿದ ಎಲ್ಲಾ ನಾಗರಿಕರಿಗೆ ಅಗತ್ಯ ಔಷಧಗಳನ್ನು ಉಚಿತವಾಗಿ ವಿತರಿಸಲಾಯಿತು.

ವೈದ್ಯಕೀಯ ಘಟಕದ ಪ್ರಧಾನ ಕಾರ್ಯದರ್ಶಿ ಡಾ.ಶಂಕರ ಗುಹಾ ದ್ವಾರಕಾನಾಥ್ ಬೆಳ್ಳೂರು ‘ಇನ್ನು ಮುಂದೆ ಪ್ರತಿ ವಾರ ಕಚೇರಿ ಆವರಣದಲ್ಲಿ ಆರೋಗ್ಯ ಶಿಬಿರ ಆಯೋಜಿಸುತ್ತೇನೆ. 300ಕ್ಕೂ ಅಧಿಕ ಜನರ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆಯನ್ನು ಉಚಿತವಾಗಿ ಮಾಡಿಸುತ್ತೇನೆ’ ಎಂದು ತಿಳಿಸಿದರು.

ಶಿಬಿರಕ್ಕೆ ಚಾಲನೆ ನೀಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ, ಶಂಕರ ಗುಹಾ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಲಯನ್ಸ್ ಕ್ಲಬ್ ಗವರ್ನರ್ ಭಕ್ತವತ್ಸಲ ರೆಡ್ಡಿ ಹಾಗೂ ಕೆಪಿಸಿಸಿ ವೈದ್ಯಕೀಯ ಘಟಕದ ಅಧ್ಯಕ್ಷ ಡಾ.ಬಿ.ಕೆ. ಮಧುಸೂದನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT