ಶನಿವಾರ, 25 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಪಿಸಿಸಿ ಅಧ್ಯಕ್ಷರ ತೇಜೋವಧೆ: ಮೂವರ ವಿರುದ್ಧ ಎಫ್‌ಐಆರ್

Published 4 ಮೇ 2024, 23:31 IST
Last Updated 4 ಮೇ 2024, 23:31 IST
ಅಕ್ಷರ ಗಾತ್ರ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ನಕಲಿ ಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟು ತೇಜೋವಧೆ ಮಾಡಿರುವ ಆರೋಪದಡಿ ಮೂವರ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

‘ಹರೀಶ್ ನಾಗರಾಜು ಎಂಬುವವರು ನಕಲಿ ಚಿತ್ರ ಹಾಗೂ ವಿಡಿಯೊ ಬಗ್ಗೆ ದೂರು ನೀಡಿದ್ದರು. ಸಾಮಾಜಿಕ ಮಾಧ್ಯಮಗಳಲ್ಲಿರುವ ಸಂತೋಷ್ ನೆಲಮಂಗಲ, ರಾಜೇಶ್ ಗೌಡ ಹಾಗೂ ಕೇಸರಿ ಸಾಮ್ರಾಟ್ ಹೆಸರಿನ ಖಾತೆಗಳ ನಿರ್ವಹಣೆದಾರರ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಡಿ.ಕೆ.ಶಿವಕುಮಾರ್ ಅವರ ನಕಲಿ ಚಿತ್ರ ಹಾಗೂ ವಿಡಿಯೊಗಳನ್ನು ಬೇರೆಯವರ ಚಿತ್ರ–ವಿಡಿಯೊಗಳಿಗೆ ಹೋಲಿಕೆ ಮಾಡಿ ಏಪ್ರಿಲ್ 29ರಂದು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಪ್ರಕಟಿಸಲಾಗಿತ್ತು. ಅವಾಚ್ಯ ಶಬ್ದಗಳಿಂದ ನಿಂದಿಸಿ ಅವಹೇಳನ ಮಾಡಲಾಗಿತ್ತು. ಕೃತ್ಯ ಎಸಗಿರುವ ಆರೋಪಿಗಳನ್ನು ಪತ್ತೆ ಮಾಡಿ, ಕಾನೂನು ಕ್ರಮ ಜರುಗಿಸುವಂತೆ ದೂರುದಾರರು ಒತ್ತಾಯಿಸಿದ್ದಾರೆ’ ಎಂದು ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT