ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೇಜಸ್ವಿ ಸೂರ್ಯಗೆ ಒಳ್ಳೆಯ ಬುದ್ಧಿ ಬರಲಿ: ಕೆಪಿಸಿಸಿಯಿಂದ ಪಂಚ ದುರ್ಗಾ ಪೂಜೆ

ಕೆಪಿಸಿಸಿ ವಕ್ತಾರ ಡಾ. ಶಂಕರ ಗುಹಾ ದ್ವಾರಕನಾಥ್ ನೇತೃತ್ವದಲ್ಲಿ ಪೂಜೆ
Last Updated 10 ಆಗಸ್ಟ್ 2022, 4:11 IST
ಅಕ್ಷರ ಗಾತ್ರ

ಬೆಂಗಳೂರು: ‘ಸಂಸದ ತೇಜಸ್ವಿ ಸೂರ್ಯ ಮತ್ತು ಬಸವನಗುಡಿ ಶಾಸಕ ರವಿ ಸುಬ್ರಹ್ಮಣ್ಯ ಅವರಿಗೆ ಒಳ್ಳೆಯ ಬುದ್ಧಿ ಬರಲಿ ಎಂದು ಪ್ರಾರ್ಥಿಸಿ ಪಂಚ ದುರ್ಗಾ ಪೂಜೆ ಮಾಡಿದ್ದೆವು.ಪೂಜೆಯ ಪಂಚ ಪುಷ್ಪ ಪ್ರಸಾದವನ್ನು ಸಂಸದರಿಗೆ ಕಳುಹಿಸಲು ಮುಂದಾದ ಪಕ್ಷದ ಇಬ್ಬರು ಕಾರ್ಯಕರ್ತರನ್ನು ತಡೆದ ಪೊಲೀಸರು ವಶಕ್ಕೆ ತೆಗೆದುಕೊಂಡರು’ ಎಂದು ಕೆಪಿಸಿಸಿ ವಕ್ತಾರ ಡಾ. ಶಂಕರ ಗುಹಾ ದ್ವಾರಕನಾಥ್ ಬೆಳ್ಳೂರು ಆರೋಪಿಸಿದರು.

ತಮ್ಮ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರ ಜೊತೆ ಅವರು ಮಂಗಳವಾರ ಪೂಜೆ ಸಲ್ಲಿಸಿದರು.

ಬಳಿಕ ಮಾತನಾಡಿದ ಗುಹಾ, ‘ತೇಜಸ್ವಿ ಸೂರ್ಯ ಮತ್ತು ರವಿ ಸುಬ್ರಹ್ಮಣ್ಯ ಅವರು ತಮ್ಮ ಸ್ವಾರ್ಥಕ್ಕಾಗಿ ಪೊಲೀಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಲೋಕ ಕಲ್ಯಾಣಾರ್ಥವಾಗಿ ನಾವು ಪೂಜೆ ಮಾಡಿದ್ದೆವು. ಆದರೆ, ಪೂಜೆಯ ಪ್ರಸಾದ ಕಳುಹಿಸುವಾಗ ಪೊಲೀಸರನ್ನು ಬಳಸಿಕೊಂಡು ಅಡ್ಡಿಪಡಿಸಿದರು. ಅಧಿಕಾರ ಬಳಸಿ ನಮ್ಮನ್ನು ಹೆದರಿಸಿದರು. ಇಂಥ ಬೆದರಿಕೆಗಳಿಗೆ ನಾವು ಜಗ್ಗಲ್ಲ. ನಮಗೆ ಭಯ ಇಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಇತ್ತೀಚೆಗೆ ನಡೆದ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಬಗ್ಗೆ ಮಾತನಾಡುವ ವೇಳೆ ತೇಜಸ್ವಿ ಸೂರ್ಯ ಅವರು, ಕಾಂಗ್ರೆಸ್ ಸರ್ಕಾರ ಇದ್ದಿದ್ದರೆ ಕಲ್ಲು ಹೊಡೆಯಬಹುದಿತ್ತು ಎಂದು ಬೇಜವಾಬ್ದಾರಿ ಹೇಳಿಕೆ‌ ನೀಡಿದ್ದರು. ಇದನ್ನು ಖಂಡಿಸಿ ಮತ್ತು ಅವರಿಗೆ ಒಳ್ಳೆಯ ಮನಃಸ್ಥಿತಿಯನ್ನು ದೇವರು ದಯಪಾಲಿಸಲಿ ಎಂದು ಪಂಚದುರ್ಗೆಯ ಜ್ವಾಲೆಯಲ್ಲಿ ದ್ವೇಷ, ಕ್ಲೇಶ, ದುಷ್ಟ ಬುದ್ಧಿ ದೂರವಾಗಲಿ ಎಂದು ಬ್ರಾಹ್ಮೀ ಮುಹೂರ್ತದಲ್ಲಿ ವಿಶೇಷ ಪೂಜೆ ಮಾಡಿದ್ದೇವೆ. ಈ ಮೂಲಕ, ‘ದ್ವೇಷ ಬಿಡಿ ಸಂಸದ ತೇಜಸ್ವಿ ಸೂರ್ಯ’ ಅಭಿಯಾನಕ್ಕೆ ಚಾಲನೆ ಕೊಟ್ಟಿದ್ದೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT