ಶನಿವಾರ, ಸೆಪ್ಟೆಂಬರ್ 19, 2020
22 °C

ಕೆಪಿಎಲ್‌ ಬೆಟ್ಟಿಂಗ್‌: ಬುಕ್ಕಿ ‌ಸಯ್ಯಾಂ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

‌ಬೆಂಗಳೂರು: ಕರ್ನಾಟಕ ಪ್ರೀಮಿಯರ್‌ ಲೀಗ್‌ (ಕೆಪಿಎಲ್) ಕ್ರಿಕೆಟ್‌ ಟೂರ್ನಿಯಲ್ಲಿ ನಡೆದಿದೆ ಎನ್ನಲಾದ ಬೆಟ್ಟಿಂಗ್‌ ಮತ್ತು ಮ್ಯಾಚ್‌ ಫಿಕ್ಸಿಂಗ್‌ ಹಗರಣದ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ಮತ್ತೊಬ್ಬ ಬುಕ್ಕಿಯನ್ನು ಬಂಧಿಸಿದ್ದಾರೆ.

ಚಂಡೀಗಡದ ಸನ್ಯಾಂ ಬಂಧಿತ ಬುಕ್ಕಿ. ಹಣಕಾಸು ವ್ಯವಹಾರ ಸಂಬಂಧ ಶನಿವಾರ ಸಂಜೆ ನಗರಕ್ಕೆ ಬಂದಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ಸಿಸಿಬಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.

ಮ್ಯಾಚ್ ಫಿಕ್ಸಿಂಗ್ ಕೃತ್ಯದಲ್ಲಿ ಕೆಪಿಎಲ್ ಆಟಗಾರರು ಮತ್ತು ಬುಕ್ಕಿಗಳ ನಡುವೆ ಮಧ್ಯಸ್ಥಿಕೆ ವಹಿಸಿ ಸನ್ಯಾಂ, ವ್ಯವಹಾರ ಕುದುರಿಸುತ್ತಿದ್ದ. ಇದೇ ಪ್ರಕರಣದಲ್ಲಿ ಬಂಧನದಲ್ಲಿರುವ ರಾಜಸ್ಥಾನದ ಡ್ರಮರ್ ಭವೇಶ್ ವಿಚಾರಣೆ ವೇಳೆ ನೀಡಿದ ಮಾಹಿತಿ ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು