ಬುಧವಾರ, ಜನವರಿ 29, 2020
24 °C

ಕೆಪಿಎಲ್ ಬೆಟ್ಟಿಂಗ್ ಹಗರಣ: ಕೆಎಸ್‌ಸಿಎ ಕಾರ್ಯದರ್ಶಿ ಮನೆ ಮೇಲೆ ಸಿಸಿಬಿ ದಾಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಂಗಳೂರು: ಕರ್ನಾಟಕ ಪ್ರೀಮಿಯರ್ ಲೀಗ್ (ಕೆಪಿಎಲ್) ಕ್ರಿಕೆಟ್ ಟೂರ್ನಿಯಲ್ಲಿ ನಡೆದಿದೆ ಎನ್ನಲಾದ ಮ್ಯಾಚ್ ಫಿಕ್ಸಿಂಗ್ ಮತ್ತು ಬೆಟ್ಡಿಂಗ್ ಪ್ರಕರಣಕ್ಕೆ ಸಂಬಂದಿಸಿ ಗುರುವಾರ ಬೆಳ್ಳಂಬೆಳಿಗ್ಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್‌ಸಿಎ) ಕಾರ್ಯದರ್ಶಿ ಸಂತೋಷ್ ಮೆನನ್ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದು ದಾಳಿ ನಡೆಸಲಾಗಿದೆ ಎಂದು ಸಿಸಿಬಿ ಜಂಟಿ ಕಮಿಷನರ್ ಸಂದೀಪ ಪಾಟೀಲ ತಿಳಿಸಿದರು. ಆದರೆ, ಪ್ರಕರಣದಲ್ಲಿ ಸಂತೋಷ್ ಮೆನನ್ ಪಾತ್ರದ ಬಗ್ಗೆ ತಿಳಿಸಲು ಅವರು ನಿರಾಕರಿಸಿದ್ದಾರೆ.

ಈ ಪ್ರಕರಣದಲ್ಲಿ  ವಿವಿಧ ತಂಡಗಳ ಮಾಲೀಕರು, ಕೋಚ್, ಆಟಗಾರರನ್ನು ಸಿಸಿಬಿ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಬಳ್ಳಾಡಿ ಟಸ್ಕರ್ಸ್ ತಂಡದ ಮಾಲೀಕ ಅರವಿಂದ್ ರೆಡ್ಡಿ ಅವರನ್ನು ಬುಧವಾರ ಮೂರು ಗಂಟೆಗೂ ಹೆಚ್ಚು ಹೊತ್ತು ವಿಚಾರಣೆ ನಡೆಸಲಾಗಿತ್ತು. ಈ ವೇಳೆ ಕೆಲವು ಮಹತ್ವದ ವಿಷಯಗಳನ್ನು ಬಾಯಿಬಿಟ್ಟಿದ್ದಾರೆ ಎನ್ನಲಾಗಿದೆ.

ಈ ಹಗರಣದಲ್ಲಿ  ಸಿನಿಮಾ ನಟಿಯರೂ ಸೇರಿದಂತೆ ಇನ್ನಷ್ಟು ಮಂದಿ ಭಾಗಿಯಾಗಿರುವ ಶಂಕೆ ಇದೆ. ಅವರೆಲ್ಲರನ್ನೂ ವಿಚಾರಣೆ ನಡೆಸಲಾಗುವುದು ಎಂದು ಸಿಸಿಬಿ ಮೂಲಗಳು ತಿಳಿಸಿವೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು