ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಪಿಎಲ್ ಬೆಟ್ಟಿಂಗ್‌: ಬುಕ್ಕಿಗಳಬಂಧನಕ್ಕೆ ಲುಕ್‌ಔಟ್‌ ನೋಟಿಸ್‌

Last Updated 5 ನವೆಂಬರ್ 2019, 8:32 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಪ್ರೀಮಿಯರ್ ಲೀಗ್ (ಕೆಪಿಎಲ್) ಕ್ರಿಕೆಟ್‌ ಪಂದ್ಯಾವಳಿಯಲ್ಲಿ ನಡೆದಿದೆ ಎನ್ನಲಾದ ಬೆಟ್ಟಿಂಗ್‌ ಮತ್ತು ಮ್ಯಾಚ್ ಫಿಕ್ಸಿಂಗ್ ಪ್ರಕರಣದ ತನಿಖೆ ತೀವ್ರಗೊಳಿಸಿರುವ ಕೇಂದ್ರ ಅಪರಾಧ ದಳ (ಸಿಸಿಬಿ) ಪೊಲೀಸರು, ದೆಹಲಿಯ ಇಬ್ಬರು ಬುಕ್ಕಿಗಳ ಬಂಧನಕ್ಕೆ ಲುಕ್‌ಔಟ್ ನೋಟಿಸ್ ಹೊರಡಿಸಿದ್ದಾರೆ.

ಸಿಸಿಬಿ ಪೊಲೀಸರು ಆರೋಪಿಗಳು ಬೆನ್ನು ಬೀಳುತ್ತಿದ್ದಂತೆ ದೆಹಲಿಯ ಬುಕ್ಕಿಗಳಾದ ಜತ್ತಿನ್, ಸಯ್ಯಾಂ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ.

‘ಆರೋಪಿಗಳನ್ನು ಬಂಧಿಸಿ, ನಗರಕ್ಕೆ ಕರೆತರಲು ಪ್ರಯತ್ನ ಮುಂದು ವರಿದಿದೆ. ತಲೆಮರೆಸಿಕೊಂಡಿರುವಬುಕ್ಕಿಗಳು ಇಂಡಿಯನ್‌ ಪ್ರೀಮಿಯರ್‌ (ಐಪಿಎಲ್) ಕ್ರಿಕೆಟ್‌ ಪಂದ್ಯಗಳಲ್ಲೂ ಮ್ಯಾಚ್ ಫಿಕ್ಸಿಂಗ್‌ನಲ್ಲಿ ಭಾಗಿಯಾಗಿರುವ ಶಂಕೆ ಇದೆ. ಅಂತರರಾಷ್ಟ್ರೀಯ ಆಟಗಾರರ ಜತೆ ಸಯ್ಯಾಂ ಸಂಪರ್ಕ ಹೊಂದಿದ್ದ ಮಾಹಿತಿ ಸಿಕ್ಕಿದೆ’ ಎಂದು ಮೂಲಗಳು ತಿಳಿಸಿವೆ.

‘ಬುಕ್ಕಿಗಳ ಬಂಧನಕ್ಕಾಗಿ ಲುಕ್‌ಔಟ್ ನೋಟಿಸ್ ಜಾರಿ ಮಾಡಲಾಗಿದೆ. ಎಲ್ಲ ವಿಮಾನ ನಿಲ್ದಾಣಗಳಿಗೆ ಆರೋಪಿಗಳ ಕುರಿತು ಮಾಹಿತಿ ರವಾನಿಸಲಾಗಿದ್ದು, ಅವರ ಬಗ್ಗೆ ವಿಷಯ ತಿಳಿದರೆ, ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ’ ಎಂದೂ ಮೂಲಗಳು ಹೇಳಿವೆ.

ಕೆಪಿಎಲ್‌ ಎಂಟನೇ ಆವೃತ್ತಿಯಲ್ಲಿ ಬೆಟ್ಟಿಂಗ್ ಮತ್ತು ಮ್ಯಾಚ್ ಫಿಕ್ಸಿಂಗ್ ನಡೆದ ಆರೋಪದಲ್ಲಿ ಬೆಳಗಾವಿ ಫ್ಯಾಂಥರ್ಸ್‌ತಂಡದ ಮಾಲೀಕ ಅಶ್ಪಾಕ್ ಅಲಿ ತಾರ್‌, ಬಳ್ಳಾರಿ ಟಸ್ಕರ್ಸ್ ತಂಡದ ಡ್ರಮ್ಮರ್ ಭವೇಶ್, ಬೆಂಗಳೂರು ಬ್ಲಾಸ್ಟರ್ ತಂಡದ ಬೌಲಿಂಗ್ ಕೋಚ್ ವಿನು ಪ್ರಸಾದ್ ಹಾಗೂ ಬ್ಯಾಟ್ಸ್‌ಮನ್‌ ವಿಶ್ವನಾಥನ್‌ ಎಂಬುವರನ್ನು ಸಿಸಿಬಿ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT