ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

2018ರ ಕೆಪಿಎಲ್ ಟೂರ್ನಿಯಲ್ಲೂ ಮ್ಯಾಚ್ ಫಿಕ್ಸಿಂಗ್! 

ಮತ್ತೆ ಇಬ್ಬರ ಬಂಧನ
Last Updated 25 ಅಕ್ಟೋಬರ್ 2019, 7:27 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಪ್ರೀಮಿಯರ್ ಲೀಗ್ (ಕೆಪಿಎಲ್) ಕ್ರಿಕೆಟ್ ಪಂದ್ಯಾವಳಿಯಲ್ಲಿ ನಡೆದಿದೆ ಎನ್ನಲಾದ ಮ್ಯಾಚ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು, 2018ರ ಟೂರ್ನಿಯಲ್ಲೂ ಮ್ಯಾಚ್ ಫಿಕ್ಸಿಂಗ್ ನಡೆದಿರುವುದನ್ನು ಪತ್ತೆ ಮಾಡಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ಬ್ಲಾಸ್ಟರ್ಸ ತಂಡದ ಬೌಲಿಂಗ್ ಕೋಚ್ ವಿನುಪ್ರಸಾದ್ ಮತ್ತು ಬ್ಯಾಟ್ಸ್ ಮನ್ ವಿಶ್ವನಾಥನ್ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

2018ರಲ್ಲಿ ನಡೆದ ಕೆಪಿಎಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಬೆಂಗಳೂರು ಮತ್ತು ಬೆಳಗಾವಿ ನಡುವೆ ನಡೆದ ಪಂದ್ಯದಲ್ಲಿ ನಿಧಾನವಾಗಿ ಬ್ಯಾಟಿಂಗ್ ಮಾಡಿದ್ದಕ್ಕೆ ವಿಶ್ವನಾಥ್ 5 ಲಕ್ಷ ರೂಪಾಯಿ ಪಡೆದಿರುವ ಬಗ್ಗೆ ಸಾಕ್ಷ್ಯ ಸಿಕ್ಕಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದರು.

ತನಿಖೆ ಪ್ರಗತಿಯಲ್ಲಿದೆ. ಮ್ಯಾಚ್ ಫಿಕ್ಸಿಂಗ್್ನಲ್ಲಿ ಕೆಲವು ಬುಕ್ಕಿಗಳು ಭಾಗಿಯಾಗಿರುವುದು ಗೊತ್ತಾಗಿದೆ. ಅವರನ್ನೂ ಶೀಘ್ರದಲ್ಲೇ ಬಂಧಿಸಲಾಗುವುದು ಎಂದೂ ಸಿಸಿಬಿ ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT