ಬೆಂಗಳೂರು: 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ಕೆಪಿಎಸ್ಸಿ ನಡೆಸಿದ ಪರೀಕ್ಷೆಗಳಲ್ಲಿ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ನೇತೃತ್ವದಲ್ಲಿ ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.

2024ರ ಆಗಸ್ಟ್ 27ರಂದು ನಡೆದ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ಅನ್ಯಾಯವಾಗಿತ್ತು. ಡಿಸೆಂಬರ್ 29ರಂದು ನಡೆದ ಮರುಪರೀಕ್ಷೆಯಲ್ಲೂ ಅದು ಪುನರಾವರ್ತನೆ ಆಗಿರುವುದು ಮಾತ್ರವಲ್ಲ, 80 ಪ್ರಶ್ನೆಗಳಲ್ಲಿ ಲೋಪವೆಸಗಿ ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ವಂಚನೆ ಎಸಗಲಾಗಿದೆ ಎಂದು ಪ್ರತಿಭಟನಕಾರರು ಆರೋಪಿಸಿದರು.

‘ಕರ್ನಾಟಕದಲ್ಲಿ ಆಡಳಿತ ಭಾಷೆ ಕನ್ನಡ. ಕೆಎಎಸ್ ಅಧಿಕಾರಿಗಳಾಗುವವರು ಕಡತಗಳನ್ನು ಕನ್ನಡದಲ್ಲೇ ಸಿದ್ಧಪಡಿಸಬೇಕು, ಕನ್ನಡದಲ್ಲೇ ವ್ಯವಹರಿಸಬೇಕು. ಇದು ಅವರ ಶಾಸನಬದ್ಧ ಕರ್ತವ್ಯ. ಹೀಗಿರುವಾಗ ಪರೀಕ್ಷೆಗಳು ಕನ್ನಡ ಮಾಧ್ಯಮದಲ್ಲೇ ನಡೆಯಬೇಕು. ಒಂದು ವೇಳೆ ಇಂಗ್ಲಿಷ್ ಮಾಧ್ಯಮದಲ್ಲೂ ನಡೆಯುವುದಾದರೆ ಮೊದಲು ಕನ್ನಡದಲ್ಲಿ ಪ್ರಶ್ನೆಪತ್ರಿಕೆ ಸಿದ್ಧಪಡಿಸಿ ಅದನ್ನು ಇಂಗ್ಲಿಷ್ಗೆ ಅನುವಾದಿಸಬೇಕು. ಆದರೆ ಅಧಿಕಾರಿಗಳು ಇಂಗ್ಲಿಷ್ನಿಂದ ಕನ್ನಡಕ್ಕೆ ಅನುವಾದಿಸುತ್ತಿದ್ದಾರೆ. ಇದರಿಂದಾಗಿ ಪರೀಕ್ಷೆ ಮತ್ತು ಮರುಪರೀಕ್ಷೆ ಎರಡರಲ್ಲೂ ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಮೂರು ಬಾರಿ ಭೇಟಿ ಮಾಡಿರುವ ಆಗಿರುವ ಪ್ರಮಾದವನ್ನು ಗಮನಕ್ಕೆ ತರಲಾಗಿದೆ. ಸಚಿವರಿಗೆ, ವಿರೋಧ ಪಕ್ಷಗಳ ನಾಯಕರಿಗೆ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯದ ಕುರಿತು ಮಾಹಿತಿ ನೀಡಲಾಗಿದೆ ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ‘ಮುಖ್ಯಮಂತ್ರಿ’ ಚಂದ್ರು, ಹಂಪ ನಾಗರಾಜಯ್ಯ, ನಲ್ಲೂರು ಪ್ರಸಾದ್ ಹಾಗೂ ಸ್ವಾಮೀಜಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.