ಸೋಮವಾರ, ಜನವರಿ 27, 2020
16 °C

428 ಗೆಜೆಟೆಡ್ ಪ್ರೊಬೆಷನರಿ: ಅಂತಿಮ ಆಯ್ಕೆ ಪಟ್ಟಿ ಪ್ರಕಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: 2015ನೇ ಸಾಲಿನ 428 ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ನೇಮಕಾತಿಯ ಅಂತಿಮ ಪಟ್ಟಿಯನ್ನು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಪ್ರಕಟಿಸಿದೆ. ಅಲ್ಲದೆ, ಗೆಜೆಟ್‌ ಅಧಿಸೂಚನೆ ಕೂಡಾ ಹೊರಡಿಸಿದೆ.

ಡಿ.23ರಂದು ತಾತ್ಕಾಲಿಕ ಪಟ್ಟಿಯನ್ನು ಕೆಪಿಎಸ್‌ಸಿ ಪ್ರಕಟಿಸಿತ್ತು. ಇದಕ್ಕೆ ಬಂದಿದ್ದ ಆಕ್ಷೇಪಣೆಗಳನ್ನು ನಿಯಮಾನುಸಾರ ಪರಿಶೀಲಿಸಿ ಯಾವುದೇ ಒಪ್ಪುವಂಥ ಆಕ್ಷೇಪಣೆಗಳು ಇಲ್ಲದ ಕಾರಣ ಅಂತಿಮ ಪಟ್ಟಿ ಪ್ರಕಟಿಸಲಾಗಿದೆ.

ತಾತ್ಕಾಲಿಕ ಹಾಗೂ ಅಂತಿಮ ಪಟ್ಟಿ ಮಧ್ಯೆ ಯಾವುದೇ ವ್ಯತ್ಯಾಸ ಆಗಿಲ್ಲ ಎಂದೂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು