ಬೆಂಗಳೂರು: ಕೆಪಿಟಿಸಿಎಲ್ ಮತ್ತು ಎಸ್ಕಾಂ ಹೊರಗುತ್ತಿಗೆ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಕೆಪಿಟಿಸಿಎಲ್ ಮತ್ತು ಎಸ್ಕಾಂ ಹೊರಗುತ್ತಿಗೆ ನೌಕರರ ಹಿತರಕ್ಷಣಾ ವೇದಿಕೆ ಹಾಗೂ ಕರ್ನಾಟಕ ರಾಜ್ಯ ಕೆಪಿಟಿಸಿಎಲ್ ಕಾಯಂಯೇತರ ನೌಕರರ ಸಂಘದ ಸದಸ್ಯರು ಗುರುವಾರ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು.

ಎಲ್ಲ ಹೊರಗುತ್ತಿಗೆ ನೌಕರರ ಸೇವೆಯನ್ನು ಕಾಯಂಗೊಳಿಸಬೇಕು. ಕಾಯಂ ಆಗುವವರೆಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ವಿದ್ಯುತ್ ಅಪಘಾತದಿಂದ ಮೃತಪಟ್ಟರೆ ಅವರ ಕುಟುಂಬಕ್ಕೆ ₹ 50 ಲಕ್ಷ ಪರಿಹಾರ ನೀಡಬೇಕು. ಅಂಗವಿಕಲರಾದರೆ ₹ 25 ಲಕ್ಷ ಪರಿಹಾರ ನೀಡಬೇಕು. ಈಗಾಗಲೇ ಮೃತಪಟ್ಟವರಿಗೆ, ತೊಂದರೆಗೊಳಗಾದವರಿಗೆ ಪರಿಹಾರ ಘೋಷಿಸಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ಗುತ್ತಿಗೆ ಪದ್ಧತಿ ಎಂಬ ಜೀತ ಪದ್ಧತಿಯಿಂದ ಮುಕ್ತಿಗೊಳಿಸಬೇಕು. ವೇತನ ನೇರ ಪಾವತಿ ಮಾಡಬೇಕು. ಒಂದೆರಡು ವರ್ಷಗಳಿಂದ ವಿವಿಧ ಕಾರಣಗಳಿಗಾಗಿ ವಜಾಗೊಂಡಿರುವ ನೌಕರರನ್ನು ತಕ್ಷಣ ಮರುನೇಮಕ ಮಾಡಬೇಕು ಎಂದು ಒತ್ತಾಯಿಸಿದರು.

ಹಿತರಕ್ಷಣಾ ವೇದಿಕೆಯ ಪದಾಧಿಕಾರಿಗಳಾದ ಲೀಲಾಸಾಗರ್ ಎಂ.ಎಸ್., ಮಹೇಶ್ ಎಲ್.ಪಿ. ಸಹಿತ ಅನೇಕರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.