ಭಾನುವಾರ, ಸೆಪ್ಟೆಂಬರ್ 26, 2021
21 °C
ಜಲಮಂಡಳಿ ಅಧಿಕಾರಿಗಳಿಗೆ ಶಾಸಕ ಬೈರತಿ ಬಸವರಾಜ ಸೂಚನೆ

ತ್ವರಿತ ಕಾಮಗಾರಿಗೆ ಶಾಸಕ ಬೈರತಿ ಸೂಚನೆ

‍ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೆ.ಆರ್.ಪುರ: ‘ಕೆ.ಆರ್.ಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾವೇರಿ ನೀರಿನ ಪೂರೈಕೆ ಮತ್ತು ಒಳಚರಂಡಿ ಪೈ‍ಪ್‌ಲೈನ್ ಕಾಮಗಾರಿಗಳನ್ನು ತುರ್ತಾಗಿ ಪೂರ್ಣಗೊಳಿಸಿ’ ಎಂದು ಜಲಮಂಡಳಿ ಅಧಿಕಾರಿಗಳಿಗೆ ಶಾಸಕ ಬೈರತಿ ಬಸವರಾಜ ತಾಕೀತು ಮಾಡಿದರು.

ಮೇಡಹಳ್ಳಿ ಪ್ರಾದೇಶಿಕ ಸಾರಿಗೆ ಕಚೇರಿ ಬಳಿ ₹2 ಕೋಟಿ ವೆಚ್ಚದ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.

‘ಜನರಿಗೆ ತೊಂದರೆ ಆಗದಂತೆ ಕಾಮಗಾರಿ ನಿರ್ವಹಿಸಬೇಕು. ಟ್ಯಾಂಕರ್ ನೀರು ಖರೀದಿ ಮಾಡುವುದು ಜನರಿಗೆ ದುಬಾರಿಯಾಗಿದೆ. ಹೀಗಾಗಿ ಆದಷ್ಟು ಬೇಗ ಕೆಲಸ ಪೂರ್ಣಗೊಳಿಬೇಕು’ ಎಂದು ಸೂಚಿಸಿದರು.

ಪಾಲಿಕೆ ಸದಸ್ಯ ಜಯಪ್ರಕಾಶ್, ಮುಖಂಡರಾದ ರಾಜೇಶ್, ಶೀಗೆಹಳ್ಳಿ ಸುಂದರ್, ಎಡ್ವಿನ್ ಇಸಾಕ್, ಓಂ ಮಹೇಶ್, ಜಗನಾಥ್, ಜಲಮಂಡಳಿ ಅಧಿಕಾರಿಗಳು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು