ಬುಧವಾರ, ಸೆಪ್ಟೆಂಬರ್ 22, 2021
23 °C

ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವುದೇ ಸಾರ್ಥಕ ರಾಜಕಾರಣ: ಮುನಿರಾಜುಗೌಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೆ.ಆರ್.ಪುರ: ‘ಸಾರ್ವಜನಿಕರ ಕಷ್ಟಗಳಿಗೆ ಸ್ಪಂದಿಸುವ ಮೂಲಕ ಸಾರ್ಥಕ ರಾಜಕಾರಣ ಮಾಡಿ’ ಎಂದು ವಿಧಾನಪರಿಷತ್ ಸದಸ್ಯ ತುಳಸಿ ಮುನಿರಾಜುಗೌಡ ಸಲಹೆ ನೀಡಿದರು.

ಕಾಚರಕನಹಳ್ಳಿಯಲ್ಲಿ ಏರ್ಪಡಿಸಿದ್ದ ಬಿಜೆಪಿ ಸರ್ವಜ್ಞನಗರ ಮಂಡಲದ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ‘ಕೋವಿಡ್‌ ಬಿಕ್ಕಟ್ಟನ್ನೂ ಪ್ರಧಾನಿ ನರೇಂದ್ರ ಮೋದಿ ಸಮರ್ಥವಾಗಿ ನಿಭಾಯಿಸಿದ್ದಾರೆ. ಲಸಿಕೆ ಮಾತ್ರವಲ್ಲದೆ, ಆಹಾರ ಸಾಮಾಗ್ರಿಗಳ ಪೂರೈಕೆ ಮಾಡುವ ಮೂಲಕ ದೇಶದ ಜನರಿಗೆ ಸೇವೆ ಸಲ್ಲಿಸಿದ್ದಾರೆ’ ಎಂದರು.

‘ನಮ್ಮ ದೇಶಕ್ಕೆ ಮಾತ್ರವಲ್ಲದೆ ವಿಶ್ವದ ಆನೇಕ ದೇಶಗಳಿಗೆ ಲಸಿಕೆ ಸರಬರಾಜು ಮಾಡುವ ಮೂಲಕ ಬಹುದೊಡ್ಡ ಕಾರ್ಯ ಮಾಡಿದ್ದಾರೆ’ ಎಂದರು. 

ಕೊರೊನಾ ಸೇನಾನಿಗಳ ಸೇವೆ ಶ್ಲಾಘಿಸಿ, ಸನ್ಮಾನಿಸಲಾಯಿತು. 

ಸರ್ವಜ್ಞನಗರ ಮಂಡಲದ ಅಧ್ಯಕ್ಷ ‌ ಮುನಿರಾಜ ಕಾರ್ಣಿಕ್, ನಗರ ಜಿಲ್ಲಾ ಅಧ್ಯಕ್ಷ ಮಂಜುನಾಥ್, ಪದ್ಮನಾಭ ರೆಡ್ಡಿ, ಕೋದಂಡರೆಡ್ಡಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.