ಕಾಂಗ್ರೆಸ್ ಕಾರ್ಯಕರ್ತರಿಂದ ವಿನೂತನ ಪ್ರತಿಭಟನೆ

ಕೆ.ಆರ್.ಪುರ: ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ರಾಮಮೂರ್ತಿ ನಗರ ಪೆಟ್ರೋಲ್ ಬಂಕ್ ಬಳಿ ಗ್ರಾಹಕರಿಗೆ ಸಿಹಿ ಹಂಚುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು.
ಪೆಟ್ರೋಲ್ ದರ ₹ 100, ಮುಟ್ಟಿರುವ ಹಿನ್ನೆಲೆ ‘100 ನಾಟೌಟ್’ ಎಂದು ಬರೆದಿರುವ ಕೇಕ್ ಕತ್ತರಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ನೀತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕೆ.ಆರ್.ಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಮಂಜುನಾಥ್, ‘ಕೊರೋನಾ ಸಂಕಷ್ಟ ನಡುವೆಯೂ ದಿನೇ ದಿನೇ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲಗಳ ದರ ಏರಿಕೆಯಾಗುತ್ತಲೇ ಇದೆ. ಇಂತಹ ಪರಿಸ್ಥಿತಿಯಲ್ಲಿ ಜನಸಾಮಾನ್ಯರು ಬದುಕುವುದಾರು ಹೇಗೆ ’ ಎಂದು ಪ್ರಶ್ನಿಸಿದರು.
ನಗರ ಸಾಮಾಜಿಕ ಜಾಲತಾಣ ಕಾರ್ಯದರ್ಶಿ ಗಗನ್ ಯಾದವ್, ಕೆ.ಆರ್.ಪುರ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಪ್ರವೀಣ್ ಗೌಡ, ವಾಡ್೯ ಅಧ್ಯಕ್ಷ ಕಲ್ಕೆರೆ ಸುನೀಲ್ ಕುಮಾರ್, ಎನ್ಎಸ್ ಯುಐ ಘಟಕದ ಅಧ್ಯಕ್ಷ ಪವನ್ ಕುಮಾರ್ ಭಾಗವಹಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.