ಮಂಗಳವಾರ, ಫೆಬ್ರವರಿ 7, 2023
27 °C

ಕೆ.ಆರ್‌ ಪುರ: ಅಪಘಾತದಲ್ಲಿ ಯುವತಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕೆ.ಆರ್.ಪುರ ಸಂಚಾರ ಪೊಲೀಸ್‌ ಠಾಣಾ ವ್ಯಾಪ್ತಿಯ ಹಳೆ ಮದ್ರಾಸ್‌ ರಸ್ತೆಯ ಸೇತುವೆ ಮೇಲೆ ಟಾಟಾ ಏಸ್‌ ಸರಕು ಸಾಗಣೆ ವಾಹನ ಹಾಗೂ ಬೈಕ್‌ ನಡುವೆ ಬುಧವಾರ ಬೆಳಿಗ್ಗೆ ನಡೆದ ಅಪಘಾತದಲ್ಲಿ ಬೈಕ್‌ ಸವಾರರಾದ ಬಿ.ಶಾಲಿನಿ (27) ಮೃತಪಟ್ಟಿದ್ದಾರೆ.

ಜೆ.ಪಿ.ನಗರದ ನೀರಾ ಥಾಯ್‌ ಸ್ಪಾದಲ್ಲಿ ಶಾಲಿನಿ ಅವರು ರಿಸೆಪ್ಷನಿಸ್ಟ್ ಆಗಿ ಕೆಲಸ ಮಾಡುತ್ತಿದ್ದರು. ಕೋರಮಂಗಲದ ತೆರಿಗೆ ಕಚೇರಿಯ ಎದುರಿನ ಅಂಬೇಡ್ಕರ್‌ ನಗರದಲ್ಲಿ ನೆಲೆಸಿದ್ದರು. ಬುಧವಾರ ಬೆಳಿಗ್ಗೆ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

‘ಟಿನ್‌ ಫ್ಯಾಕ್ಟರಿ ಕಡೆಯಿಂದ ಸರಕು ವಾಹನ ಬರುತ್ತಿತ್ತು. ಚಾಲಕ ಅತಿ ವೇಗವಾಗಿ ವಾಹನ ಚಾಲನೆ ಮಾಡುತ್ತಿದ್ದ. ಸೇತುವೆಯ ಮಸೀದಿ ಬಳಿ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದು, ಶಾಲಿನಿ ಹಾಗೂ ಹಿಂಬದಿ ಸವಾರರಾದ ಜೆ. ಅಲೆನ್‌
ಸ್ಮಿತ್‌ ಗಂಭೀರವಾಗಿ ಗಾಯಗೊಂಡಿದ್ದರು. ಇಬ್ಬರನ್ನೂ ಆಲ್ಟೋರ್‌ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಶಾಲಿನಿ ಮೃತಪಟ್ಟಿದ್ದಾರೆ. ಚಾಲಕ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಸಿಸಿಟಿವಿ ದೃಶ್ಯಾವಳಿ ಆಧರಿಸಿ ಚಾಲಕನ ಪತ್ತೆ ಮಾಡಲಾಗುವುದು’ ಎಂದು ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು