ಕೆ.ಆರ್.ಪುರ: ಪಟ್ಟಣದಲ್ಲಿ ಸಂಚಾರಿ ಪೊಲೀಸ್ ಠಾಣೆಯ ಕಟ್ಟಡ ಆರು ತಿಂಗಳ ಹಿಂದೆ ಪೂರ್ಣಗೊಂಡರೂ ಇದುವರೆಗೆ ಕಟ್ಟಡ ಉದ್ಘಾಟನೆ ಭಾಗ್ಯ ಕಂಡಿಲ್ಲ.

ಸಂಚಾರ ಠಾಣೆ ಪ್ರಸ್ತುತ ಮಾರುಕಟ್ಟೆ ಸಮೀಪದ ಹಳೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ. ಈ ಕಟ್ಟಡ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತಿರುವ ರಸ್ತೆಯಲ್ಲಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗಿತ್ತು. ಪೊಲೀಸರು ವಾಹನಗಳ ತಪಾಸಣೆ ನಡೆಸುವ ವೇಳೆ ಸಂಚಾರ ದಟ್ಟಣೆ ಉಂಟಾಗುತ್ತಿತ್ತು. ಕೆ.ಆರ್.ಪುರ ಎಕ್ಸ್‌ಟೆನ್ಶನ್ ಬಳಿ ನೂತನ ಕಟ್ಟಡಕ್ಕೆ ಆಗಿನ ಗೃಹ ಸಚಿವ ಜಿ.ಪರಮೇಶ್ವರ ಒಂದೂವರೆ ವರ್ಷಗಳ ಹಿಂದೆ ಗುದ್ದಲಿ ಪೂಜೆ ನೆರವೇರಿಸಿದ್ದರು.

ಕಟ್ಟಡ ಉದ್ಘಾಟನೆಗೆ ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾದ ಕಾರಣ ಉದ್ಘಾಟನಾ ಮುಂದೂಡಲಾಗಿತ್ತು.

‘ಠಾಣೆ ಪಕ್ಕದಲ್ಲಿ ತಪಾಸಣೆಗಾಗಿ ವಾಹನಗಳನ್ನು ನಿಲ್ಲಿಸುವಾಗ ಸ್ಥಳಾವಕಾಶ ಕೂಡ ಸಾಲುತ್ತಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.