ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ಸೋಲಿನ ಕನವರಿಕೆಯಿಂದ ಮುಂದಿನ ಪ್ರಯತ್ನಕ್ಕೆ ಧಕ್ಕೆ'

Last Updated 3 ಅಕ್ಟೋಬರ್ 2019, 20:06 IST
ಅಕ್ಷರ ಗಾತ್ರ

ಕೆಂಗೇರಿ: ಸೋಲಿನ ಕನವರಿಕೆಯು ನಮ್ಮ ಮುಂದಿನ ಪ್ರಯತ್ನಕ್ಕೆ ಧಕ್ಕೆ ತರುತ್ತದೆ. ಸೋಲನ್ನು ಮರೆತು ಆತ್ಮ ವಿಶ್ವಾಸದಿಂದ ಮುನ್ನುಗ್ಗಬೇಕು ಎಂದು ಎಂದು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಆರ್.ವೇಣುಗೋಪಾಲ್ ಅಭಿಪ್ರಾಯಪಟ್ಟರು.

ಕಲಾ ಮತ್ತು ಪ್ರದರ್ಶನ ವಿಭಾಗದ ವತಿಯಿಂದ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಯುವಜನೋತ್ಸವ-2019 ಕಾರ್ಯಕ್ರಮದಲ್ಲಿ ಮಾತನಾಡಿದರು.

ಕುಲಸಚಿವ ಪ್ರೊ.ಬಿ.ಕೆ.ರವಿ ಮಾತನಾಡಿ, ‘ಸುಮಾರು 50ಕ್ಕೂ ಕಾಲೇಜುಗಳ ವಿದ್ಯಾರ್ಥಿಗಳು ಯುವಜನೋತ್ಸವದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ವಿದ್ಯಾರ್ಥಿಗಳಲ್ಲಿನ ಪ್ರತಿಭಾ ಅನಾವರಣಕ್ಕೆ ಇಂತಹ ವೇದಿಕೆಗಳು ಸಹಕಾರಿಯಾಗಲಿವೆ. ವ್ಯಕ್ತಿತ್ವ ವಿಕಸನದಲ್ಲಿ ಸಾಂಸ್ಕತಿಕ ಕಾರ್ಯಕ್ರಮಗಳು ಪಠ್ಯಗಳಷ್ಟೇ ಪ್ರಮುಖ ಪಾತ್ರ ವಹಿಸುತ್ತವೆ’ ಎಂದರು.

ರಂಗಭೂಮಿ ಕಲಾವಿದ ರಿಚರ್ಡ್ ಲೂಯಿಸ್ ಮಾತನಾಡಿ, ‘ರಂಗಭೂಮಿಯು ಜೀವನ ಪಾಠವನ್ನು ಕಲಿಸುತ್ತದೆ. ಏನೂ ಓದದ ಎಷ್ಟೋ ಕಲಾವಿದರ ಬದುಕು ಇಂದು ಅಧ್ಯಯನದ ವಿಷಯವಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT