ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೂಸ್ವಾಧೀನ: ದಾಖಲೆ ಸಲ್ಲಿಕೆಗೆ ಅವಧಿ ವಿಸ್ತರಣೆ

Last Updated 2 ಜೂನ್ 2021, 1:38 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ (ಕೆಆರ್‌ಡಿಸಿಎಲ್‌) ಅಭಿವೃದ್ಧಿಪಡಿಸುತ್ತಿರುವ ರಸ್ತೆಗಳಿಗೆ ಅಗತ್ಯ ಇರುವ ಭೂಮಿ ಸ್ವಾಧೀನ ಸಂಬಂಧ ಹೊರಡಿಸಿರುವ ಅಂತಿಮ ಅಧಿಸೂಚನೆಯಂತೆ ಆಸ್ತಿಗಳ ಮಾಲೀಕರು ದಾಖಲೆಗಳನ್ನು ಸಲ್ಲಿಸಲು ನೀಡಿದ್ದ ಅವಧಿಯನ್ನು ನಿಗಮ ವಿಸ್ತರಣೆ ಮಾಡಿದೆ.

ಬೂದಿಗೆರೆ, ಮೈಲನಹಳ್ಳಿ ಮಾರ್ಗದಲ್ಲಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಒಂದು ರಸ್ತೆ, ನೆಲಮಂಗಲದಿಂದ ಮಧುರೆ, ರಾಜಾನುಕುಂಟೆ, ತಿಪ್ಪಸಂದ್ರ ಮಾರ್ಗವಾಗಿ ದೇವನಹಳ್ಳಿಗೆ ಸಂಪರ್ಕ ಕಲ್ಪಿಸುವ ಮತ್ತೊಂದು ರಸ್ತೆ ವಿಸ್ತರಣೆ ಮಾಡಿ ಅಭಿವೃದ್ಧಿಪಡಿಸಲು ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆಯನ್ನು ನಿಗಮ ಮೇ 17 ರಂದು ಹೊರಡಿಸಿದೆ. ‌

‘ಆಸ್ತಿಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸಲು ಮಾಲೀಕರಿಗೆ 15 ದಿನಗಳ ಕಾಲಾವಕಾಶ ನೀಡಲಾಗಿತ್ತು. ಈ ಅವಧಿ ಜೂನ್ 2ಕ್ಕೆ ಅಂತ್ಯಗೊಳ್ಳುತ್ತದೆ. ಲಾಕ್‌ಡೌನ್ ಇರುವ ಕಾರಣ ಈ ಅವಧಿಯನ್ನು ಜೂನ್ 17ರ ತನಕ ವಿಸ್ತರಿಸಲಾಗಿದೆ’ ಎಂದು ಕೆಆರ್‌ಡಿಸಿಎಲ್ ಹೆದ್ದಾರಿ ವಿಭಾಗದ ಮುಖ್ಯ ಎಂಜಿನಿಯರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT