ಬೆಂಗಳೂರು: ಉತ್ತಮ ಸಾಧನೆ ಮಾಡಿದ ಐವರು ರೈತರಿಗೆ ರಾಜ್ಯಮಟ್ಟದ ‘ಕೃಷಿ ಪ್ರಶಸ್ತಿ’ಗಳನ್ನು ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಪ್ರಕಟಿಸಿದೆ.
‘ಎಚ್.ಡಿ.ದೇವೇಗೌಡ ರಾಜ್ಯಮಟ್ಟದ ಅತ್ಯುತ್ತಮ ರೈತ ಪ್ರಶಸ್ತಿ’ಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀಡಿಗಾನಹಳ್ಳಿಯ ಬಿ.ಆರ್. ಮಂಜುನಾಥ, ‘ಎಂ.ಎಚ್.ಮರೀಗೌಡ ರಾಜ್ಯಮಟ್ಟದ ಅತ್ಯುತ್ತಮ ತೋಟಗಾರಿಕಾ ರೈತ ಪ್ರಶಸ್ತಿ’ಗೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಹೊಸಹಳ್ಳಿಯ ಎಚ್.ಟಿ. ರಾಜೇಂದ್ರ ಅವರನ್ನು ಆಯ್ಕೆ ಮಾಡಲಾಗಿದೆ.
‘ಕ್ಯಾನ್ ಬ್ಯಾಂಕ್ ರಾಜ್ಯಮಟ್ಟದ ಅತ್ಯುತ್ತಮ ರೈತ ಪ್ರಶಸ್ತಿ’ಗೆ ರಾಮನಗರ ಜಿಲ್ಲೆಯ ಬಿಳಗುಂಬದ ಬಿ.ಪಿ. ವಾಸು, ‘ಕ್ಯಾನ್ ಬ್ಯಾಂಕ್ ರಾಜ್ಯಮಟ್ಟದ ಅತ್ಯುತ್ತಮ ರೈತ ಮಹಿಳೆ ಪ್ರಶಸ್ತಿ’ಗೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಗುಂಡಮನತ್ತದ ಎ.ವಿ. ರತ್ನಮ್ಮ ಮತ್ತು ‘ಆರ್.ದ್ವಾರಕೀನಾಥ್ ಅತ್ಯುತ್ತಮ ರೈತ ಪ್ರಶಸ್ತಿ’ಗೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಬಳದರೆಯ ಬಿ.ಜಿ. ಮಂಜೇಗೌಡ ಆಯ್ಕೆಯಾಗಿದ್ದಾರೆ.
‘ಇದೇ 17ರಂದು ನಡೆಯಲಿರುವ ಕೃಷಿ ಮೇಳದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ’ ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕ ವಿ.ಎಲ್. ಮಧುಪ್ರಸಾದ್ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.