ಹಳ್ಳಿಕಾರ್ ತಳಿಯ ಎತ್ತುಗಳ ಮುಂಭಾಗದಲ್ಲಿ ನಿಂತುಕೊಂಡು ಯುವತಿಯೊಬ್ಬರು ಫೋಟೊ ತೆಗೆಸಿಕೊಂಡರು
ಜಿಕೆವಿಕೆ ಆವರಣದಲ್ಲಿ ಭಾನುವಾರ ಸಂಚಾರ ದಟ್ಟಣೆ ಹೆಚ್ಚಿತ್ತು
ಕೃಷಿ ಮೇಳದ ಸಮಾರೋಪ ಸಮಾರಂಭದಲ್ಲಿ ಐಸಿಎಆರ್ ಉಪಮಹಾನಿರ್ದೇಶಕ ಸಂಜಯ್ ಕುಮಾರ್ ಸಿಂಗ್ ಅವರಿಗೆ ‘ಡಾ.ಎಂ.ಎಚ್. ಮರೀಗೌಡ ರಾಷ್ಟ್ರೀಯ ದತ್ತಿ ಅತ್ಯುತ್ತಮ ತೋಟಗಾರಿಕಾ ಸಂಶೋಧಾನ ಪ್ರಶಸ್ತಿ’ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀಡಿಗಾನಹಳ್ಳಿಯ ರೈತ ಬಿ.ಆರ್. ಮಂಜುನಾಥ ಅವರಿಗೆ ‘ಡಾ.ಎಂ.ಎಚ್. ಮರೀಗೌಡ ರಾಜ್ಯಮಟ್ಟದ ಅತ್ಯುತ್ತಮ ತೋಟಗಾರಿಕಾ ರೈತ ಪ್ರಶಸ್ತಿ’ ಮೈಸೂರು ಜಿಲ್ಲೆಯ ಎಚ್.ಡಿ. ಕೋಟೆ ತಾಲ್ಲೂಕಿನ ರೈತ ಎಚ್.ಎಲ್. ಗೋವಿಂದಪ್ಪ ಅವರಿಗೆ ‘ಡಾ.ಆರ್. ದ್ವಾರಕೀನಾಥ್ ಅತ್ಯುತ್ತಮ ರೈತ ಪ್ರಶಸ್ತಿ’ಯನ್ನು ನೀಡಿ ಗೌರವಿಸಲಾಯಿತು. ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಎಸ್.ವಿ. ಸುರೇಶ ವಿಸ್ತರಣಾ ನಿರ್ದೇಶಕ ವೈ.ಎನ್. ಶಿವಲಿಂಗಯ್ಯ ಕುಲಸಚಿವ ಕೆ.ಸಿ. ನಾರಾಯಣಸ್ವಾಮಿ ಉಪಸ್ಥಿತರಿದ್ದರು