ಸೋಮವಾರ, ಅಕ್ಟೋಬರ್ 19, 2020
22 °C

ಕೆಆರ್‌ಎಸ್‌: ಚುನಾವಣಾ ಪ್ರಚಾರ ಕಚೇರಿ ಉದ್ಘಾಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜರಾಜೇಶ್ವರಿನಗರದ ಕ್ಷೇತ್ರದ ಉಪಚುನಾವಣೆಯಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ (ಕೆಆರ್‌ಎಸ್‌) ಕಣಕ್ಕೆ ಇಳಿದಿರುವ  ಕೆ.ಬಿ.ಅರವಿಂದ್ ಅವರ ಚುನಾವಣಾ ಪ್ರಚಾರ ಕಚೇರಿಯನ್ನು ಸಾಮಾಜಿಕ ಕಾರ್ಯಕರ್ತ ಎಚ್.ಎಂ.ವೆಂಕಟೇಶ್ ಅವರು ರಾಜರಾಜೇಶ್ವರಿ ನಗರದಲ್ಲಿ ಶುಕ್ರವಾರ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು,' ಈ ಭ್ರಷ್ಟ ಪಕ್ಷಾಂತರಿಗಳು, ಅವಕಾಶವಾದಿ ಹಾಗೂ ಹಣದ ಹಪಾಹಪಿ ಹೊಂದಿರುವ ರಾಜಕಾರಣಿಗಳ ಬಗ್ಗೆ ಜನರಿಗೆ ತಿಳಿಸಿ, ಪ್ರಾಮಾಣಿಕ ರಾಜಕೀಯದ ಅಭ್ಯರ್ಥಿಯನ್ನು ಗೆಲ್ಲಿಸಲು ಸಿಕ್ಕಿರುವ ಅವಕಾಶ ಇದು. ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ಇದನ್ನು ಸದ್ಬಳಕೆ ಮಾಡಿಕೊಳ್ಳಲಿ' ಎಂದು ಶುಭ ಹಾರೈಸಿದರು.

ಪಕ್ಷದ ರಾಜ್ಯ ಉಪಾಧ್ಯಕ್ಷ ಅಮೃತ್ ಶೆಣೈ,' ರಾಜ್ಯದಲ್ಲಿ ಕುಟುಂಬ ರಾಜಕಾರಣಕ್ಕೆ ಮೀಸಲಾಗದ ಒಂದು ಪ್ರಾಮಾಣಿಕ ಪ್ರಾದೇಶಿಕ ಪಕ್ಷದ ಅವಶ್ಯಕ. ಅದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಮಾತ್ರ ಸಾಧ್ಯ. ಪಕ್ಷದ ಎಲ್ಲ ಸದಸ್ಯರು ಪರಿಶ್ರಮ ಹಾಕಬೇಕಿದೆ' ಎಂದರು.

ಕೆಆರ್‌ಎಸ್‌ ಪ್ರಧಾನ ಕಾರ್ಯದರ್ಶಿ ದೀಪಕ್, ಯುವ ಘಟಕದ ಅಧ್ಯಕ್ಷ ರಘು ಜಾಣಗೆರೆ, ಬೆಂಗಳೂರು ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ್ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು