ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಆರ್‌ಎಸ್ ಬೈಕ್‌ ಜಾಥಾ: 3 ಸಾವಿರ ಕಿ.ಮೀ ಸಂಚಾರ

Published 2 ಮಾರ್ಚ್ 2024, 15:22 IST
Last Updated 2 ಮಾರ್ಚ್ 2024, 15:22 IST
ಅಕ್ಷರ ಗಾತ್ರ

ಬೆಂಗಳೂರು: ‘ಕರ್ನಾಟಕಕ್ಕಾಗಿ ನಾವು’ ಹೆಸರಿನಲ್ಲಿ ಕೆಆರ್‌ಎಸ್‌ ಪಕ್ಷ ಆಯೋಜಿಸಿದ್ದ ಬೈಕ್‌ ಜಾಥಾವು ಶನಿವಾರ ನೆಲಮಂಗಲ ತಲುಪಿತು. ರಾಜ್ಯ ವ್ಯಾಪಿ 13 ದಿನಗಳ ಬೈಕ್‌ ಜಾಥಾವು 3 ಸಾವಿರ ಕಿ.ಮೀ ಸಂಚರಿಸಿತ್ತು.

ಫೆ.19ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆರಂಭವಾದ ಜಾಥಾವು ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ, ರಾಮನಗರ, ಮಂಡ್ಯ, ಚಾಮರಾಜನಗರ, ಮೈಸೂರು, ಕೊಡಗು, ಮಂಗಳೂರು, ಉಡುಪಿ, ಉತ್ತರ ಕನ್ನಡ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ವಿಜಯನಗರ, ಕೊಪ್ಪಳ, ಗದಗ, ಹಾವೇರಿ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ತುಮಕೂರು ಮಾರ್ಗವಾಗಿ ನೆಲಮಂಗಲ ತಲುಪಿತು.

ಕೆಆರ್‌ಎಸ್ ಪಕ್ಷದ ರಾಜ್ಯ ಅಧ್ಯಕ್ಷ ರವಿ ಕೃಷ್ಣಾರೆಡ್ಡಿ ಮಾತನಾಡಿ, ‘ಭ್ರಷ್ಟರು, ಅಪ್ರಾಮಾಣಿಕರು, ಸ್ವಜನಪಕ್ಷಪಾತಿಗಳು ಹಾಗೂ ಕುಟುಂಬ ರಾಜಕಾರಣದ ಮೂಲಕ ಪ್ರಜಾಪ್ರಭುತ್ವದ ಆಶಯಗಳನ್ನು ಮಣ್ಣುಪಾಲು ಮಾಡುತ್ತಿರುವ ರಾಜಕಾರಣಿಗಳನ್ನು ಆಡಳಿತದಿಂದ ದೂರ ಇಡಬೇಕು’ ಎಂದು ಮನವಿ ಮಾಡಿದರು.

ರಾಜ್ಯ ಉಪಾಧ್ಯಕ್ಷ ಎಸ್‌.ಎಚ್‌.ಲಿಂಗೇಗೌಡ ಮಾತನಾಡಿ, ‘ರಾಜ್ಯದ ಜನರಿಗೆ ನಿರಂತರವಾಗಿ ದ್ರೋಹ ಮಾಡುತ್ತಿರುವ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್‌ ತಿರಸ್ಕರಿಸಿ. ರಾಜ್ಯದ ಏಕೈಕ ಪ್ರಾಮಾಣಿಕ ಮತ್ತು ಪ್ರಾದೇಶಿಕ ಪಕ್ಷವಾದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವನ್ನು ಬೆಂಬಲಿಸಿ’ ಎಂದು ಕೋರಿದರು.

ಕೆಆರ್‌ಎಸ್‌ ಪಕ್ಷದಿಂದ ನಡೆದ ಬೈಕ್‌ ಜಾಥಾ.
ಕೆಆರ್‌ಎಸ್‌ ಪಕ್ಷದಿಂದ ನಡೆದ ಬೈಕ್‌ ಜಾಥಾ.

ಬೈಕ್ ಜಾಥಾದಲ್ಲಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಎನ್‌.ದೀಪಕ್, ರಾಜ್ಯ ಕಾರ್ಯದರ್ಶಿ ರಘು ಜಾಣಗೆರೆ, ನರಸಿಂಹಮೂರ್ತಿ, ಜಂಟಿ ಕಾರ್ಯದರ್ಶಿ ರಘುಪತಿ ಭಟ್, ಸಂಘಟನಾ ಕಾರ್ಯದರ್ಶಿ ಎಲ್.ಜೀವನ್, ಕೃಷ್ಣ ವಿ.ಬಿ., ಬಿ.ಜಿ.ಕುಂಬಾರ್, ನಂದಾರೆಡ್ಡಿ, ನೆಲಮಂಗಲ ತಾಲ್ಲೂಕು ಅಧ್ಯಕ್ಷ ಅರುಣ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT