ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಆರ್‌ಎಸ್‌ ಪಕ್ಷದ ‘ಕರ್ನಾಟಕ ಜನಚೈತನ್ಯ ಯಾತ್ರೆ’ ಆರಂಭ

Last Updated 24 ಏಪ್ರಿಲ್ 2022, 18:58 IST
ಅಕ್ಷರ ಗಾತ್ರ

ಬೆಂಗಳೂರು: ಭ್ರಷ್ಟಾಚಾರದ ವಿರುದ್ಧ ಜನಜಾಗೃತಿ ಮೂಡಿಸುವ ಉದ್ದೇಶದಿಂದ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್‌) ಪಕ್ಷ ಆರಂಭಿಸಿರುವ ‘ಕರ್ನಾಟಕ ಜನಚೈತನ್ಯ ಯಾತ್ರೆಗೆ’ ಫ್ರೀಡಂ ಪಾರ್ಕ್‌ನಲ್ಲಿ ಸಂಯುಕ್ತ ಜನತಾದಳ (ಜೆಡಿಯು) ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮಹಿಮಾ ಪಟೇಲ್ ಅವರು ಭಾನುವಾರ ಚಾಲನೆ ನೀಡಿದರು.

ಕೆಆರ್‌ಎಸ್‌ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ರವಿಕೃಷ್ಣಾರೆಡ್ಡಿ ಈ ಯಾತ್ರೆಯ ನೇತೃತ್ವ ವಹಿಸಿದ್ದಾರೆ. ಚಾಲನಾ ಸಮಾವೇಶದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದ ಕೆಆರ್‌ಎಸ್‌ ಪಕ್ಷದ ನೂರಾರು ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದರು.

ಮಹಿಮಾ ಪಟೇಲ್‌ ಮಾತನಾಡಿ, ‘ಈ ಯಾತ್ರೆ ಯಶಸ್ವಿಯಾಗಿ ಸುವರ್ಣ ಕರ್ನಾಟಕ ಕಟ್ಟುವಲ್ಲಿ ನಾವೆಲ್ಲರೂ ಶ್ರಮಿಸೋಣ’ ಎಂದು ಕರೆ ನೀಡಿದರು.

ರವಿಕೃಷ್ಣಾ‌ರೆಡ್ಡಿ ಮಾತನಾಡಿ, ‘ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷ ಒಂದೇ ನಾಣ್ಯದ ಎರಡು ಮುಖಗಳು ಇದ್ದಂತೆ. ಹಿಂದಿನಿಂದಲೂ ಭ್ರಷ್ಟಾಚಾರ ನಡೆದೇ ಇದೆ. ಈ ಭ್ರಷ್ಟಾಚಾರ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಈ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಇಡೀ ರಾಜ್ಯದಲ್ಲಿ ಈ ಯಾತ್ರೆ ನಡೆಯಲಿದೆ’ ಎಂದರು.

ರಾಷ್ಟ್ರಕವಿ ಕುವೆಂಪು ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಯಾತ್ರೆಗೆ ಚಾಲನೆ ನೀಡಲಾಯಿತು. ಯಾತ್ರೆಯು ಯಲಹಂಕ, ದೊಡ್ಡಬಳ್ಳಾಪುರ, ಗೌರಿಬಿದನೂರು ಮುಖಾಂತರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ವಿದುರಾಶ್ವತ್ಥ ಕಡೆಗೆ ತೆರಳಿತು.

ಸಮಾವೇಶದಲ್ಲಿ 50 ಕ್ಕೂ ಹೆಚ್ಚು ಜನರು ಕೆಆರ್‌ಎಸ್‌ ಪಕ್ಷ ಸೇರಿದರು. ಅಲ್ಲದೆ, ಯಾತ್ರೆಗೆ 45 ಸಾವಿರಕ್ಕೂ ಹೆಚ್ಚು ದೇಣಿಗೆ ಕೂಡಾ ಸಂಗ್ರಹವಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT