ಬೆಂಗಳೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ (ಕೆಎಸ್‌ಎಲ್‌ಎಸ್‌ಎ) ವತಿಯಿಂದ ಮಾ.27ರಂದು ಮೆಗಾ ಲೋಕ ಅದಾಲತ್ ಆಯೋಜಿಸಲಾಗಿದೆ ಎಂದು ಕೆಎಸ್‌ಎಲ್‌ಎಸ್‌ಎ ಕಾರ್ಯನಿರ್ವಾಹಕ ಅಧ್ಯಕ್ಷ ನ್ಯಾಯಮೂರ್ತಿ ಅರವಿಂದಕುಮಾರ್ ತಿಳಿಸಿದರು.

ಅದಾಲತ್ ಅನ್ನು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಉದ್ಘಾಟಿಸಲಿದ್ದಾರೆ. 2.74 ಲಕ್ಷ ಪ್ರಕರಣಗಳನ್ನು ಈ ಅದಾಲತ್‌ನಲ್ಲಿ ಇತ್ಯರ್ಥಪಡಿಸಲು ಗುರುತಿಸಲಾಗಿದೆ. 958 ನ್ಯಾಯಾಧೀಶರು ಮತ್ತು ನ್ಯಾಯಾಂಗ ಇಲಾಖೆ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ ಎಂದು ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.

ಡಿಸೆಂಬರ್‌ನಲ್ಲಿ ನಡೆದ ಲೋಕ ಅದಾಲತ್‌ನಲ್ಲಿ ಒಟ್ಟು 2,63,215 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಮಾ.27ರಂದು ವಿಡಿಯೊ ಕಾನ್ಫರೆನ್ಸ್ ಮೂಲಕ ಅದಾಲತ್ ನಡೆಸಲಾಗುವುದು ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.