ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಎಸ್‌ಪಿಸಿಬಿ ಅಧ್ಯಕ್ಷರ ನೇಮಕ ಪ್ರಶ್ನಿಸಿ ಪಿಐಎಲ್‌: ನೋಟಿಸ್‌

Last Updated 20 ಡಿಸೆಂಬರ್ 2021, 19:31 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ (ಕೆಎಸ್‌ಪಿಸಿಬಿ) ಅಧ್ಯಕ್ಷ ಸ್ಥಾನಕ್ಕೆ ಶಾಂತ ಅವ್ವರೇಹಳ್ಳಿ ತಿಮ್ಮಯ್ಯ ಅವರ ನೇಮಕ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಶಾಂತ ಅವ್ವೇರಹಳ್ಳಿಗೆ ತುರ್ತು ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಈ ಸಂಬಂಧ ಬಸವನಗುಡಿಯ ಪುಷ್ಪಾ ಎ.ಗಾವಡಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ವಕೀಲ ಎನ್‌. ಶ್ರೀರಾಮ ರೆಡ್ಡಿ ಅವರ ವಾದ ಆಲಿಸಿದ ಬಳಿಕ ನ್ಯಾಯಪೀಠ ಪ್ರತಿವಾದಿಗಳಿಗೆ ತುರ್ತು ನೋಟಿಸ್ ಜಾರಿಗೊಳಿಸಲು ಆದೇಶಿಸಿ, ‘ಈ ಕುರಿತಂತೆ ಮಾಹಿತಿ ಪಡೆದು ಸಲ್ಲಿಸಬೇಕು’ ಎಂದು ಸರ್ಕಾರಿ ವಕೀಲರಿಗೆ ಸೂಚಿಸಿ ವಿಚಾರಣೆ ಮುಂದೂಡಿದೆ.

ಆಕ್ಷೇಪವೇನು?: ‘ಶಾಂತ ಅವ್ವರೇಹಳ್ಳಿ ತಿಮ್ಮಯ್ಯ ಅವರು ಮಾಲಿನ್ಯ ಉಂಟು ಮಾಡುವ ಹಲವು ಕಂಪನಿಗಳ ಸಲಹೆಗಾರರಾಗಿದ್ದರು ಮತ್ತು ಅವರೇ ಸ್ವತಃ ಕಲವು ಕಂಪನಿಗಳ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ನೇಮಕವಾಗುವ ಎರಡು ತಿಂಗಳ ಹಿಂದಷ್ಟೇ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹಾಗಾಗಿ ವೈಯಕ್ತಿಕ ಹಿತಾಸಕ್ತಿ ಸಂಘರ್ಷದ ಹಿನ್ನೆಲೆಯಲ್ಲಿ ಅವರ ನೇಮಕ ಕಾನೂನು ಬಾಹಿರವಾಗಿದೆ’ ಎಂಬುದು ಅರ್ಜಿದಾರರ ಆಕ್ಷೇಪ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT