ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಮಾರ್ಟ್‌ಸಿಟಿ ಲಿಮಿಟೆಡ್ ವಿರುದ್ಧ ಕ್ರಮ ಏನು: ಹೈಕೋರ್ಟ್ ಪ್ರಶ್ನೆ

Last Updated 7 ಡಿಸೆಂಬರ್ 2020, 21:01 IST
ಅಕ್ಷರ ಗಾತ್ರ

ಬೆಂಗಳೂರು: ಕಾಮಗಾರಿ ನಿರ್ವಹಿಸುವಾಗ ಘನತ್ಯಾಜ್ಯ ನಿರ್ವಹಣಾ ನಿಯಮಗಳನ್ನು ಪಾಲಿಸದ ಮಂಗಳೂರು ಸ್ಮಾರ್ಟ್‌ಸಿಟಿ ಲಿಮಿಟೆಡ್‌ ವಿರುದ್ಧ ಪ್ರಾರಂಭಿಸಿರುವ ಕ್ರಮಗಳ ಬಗ್ಗೆ ವರದಿ ಸಲ್ಲಿಸುವಂತೆ ರಾಜ್ಯ ಮಾಲಿನ್ಯ ನಿಯಂತ್ರಣಾ ಮಂಡಳಿಗೆ (ಕೆಎಸ್‌ಪಿಸಿಬಿ) ಹೈಕೋರ್ಟ್‌ ನಿರ್ದೇಶನ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಸ್ಮಾರ್ಟ್‌ಸಿಟಿ ಲಿಮಿಟೆಡ್‌ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ ಎಂದು ತಿಳಿಸುವಂತೆ ಕೆಎಸ್‌ಪಿಸಿಬಿಗೆ ಸೂಚನೆ ನೀಡಿತು.

‘ಪರಿಸರಕ್ಕೆ ಹಾನಿ ಉಂಟು ಮಾಡುತ್ತಿರುವವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕಂಡುಬಂದಲ್ಲಿ ಕ್ರಿಮಿನಲ್ ಮೊಕದ್ದಮೆ ಪ್ರಾರಂಭಿಸಲಾಗುತ್ತದೆ’ ಎಂದು ಪೀಠ ಎಚ್ಚರಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT