ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ; ವಾಹನದಲ್ಲೇ ಕೆಎಸ್‌ಆರ್‌ಪಿ ‍ಪೊಲೀಸ್ ಆತ್ಮಹತ್ಯೆ

Last Updated 23 ಜೂನ್ 2020, 7:37 IST
ಅಕ್ಷರ ಗಾತ್ರ

ಬೆಂಗಳೂರು: ಕೊರೊನಾ ಸೋಂಕು ದೃಢಪಟ್ಟಿದ್ದರಿಂದಾಗಿ ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ಹೊರಟಿದ್ದ ರಾಜ್ಯ ಪೊಲೀಸ್ ಮೀಸಲು ಪಡೆಯ (ಕೆಎಸ್‌ಆರ್‌ಪಿ) ಹೆಡ್‌ ಕಾನ್‌ಸ್ಟೆಬಲೊಬ್ಬರು, ಪೊಲೀಸ್ ವಾಹನದಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

50 ವರ್ಷದ ಹೆಡ್‌ ಕಾನ್‌ಸ್ಟೆಬಲ್ ಅವರು ಕೊರೊನಾ ಕರ್ತವ್ಯ ನಿರ್ವಹಿಸಿದ್ದರು. ಸೋಂಕಿತರೊಬ್ಬರ ಸಂಪರ್ಕದಲ್ಲಿದ್ದ ಕಾರಣಕ್ಕೆ ಕ್ವಾರಂಟೈನ್‌ನಲ್ಲಿ ಇದ್ದರು. ಕೆಎಸ್‌ಆರ್‌ಪಿ ಪೊಲೀಸರನ್ನು ಸಾಮೂಹಿಕವಾಗಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಹೆಡ್‌ ಕಾನ್‌ಸ್ಟೆಬಲ್ ಸಹ ಜೂನ್ 20ರಂದು ಪರೀಕ್ಷೆ ಮಾಡಿಸಿದ್ದರು.

ಪರೀಕ್ಷಾ ವರದಿ ಸೋಮವಾರವಷ್ಟೇ ಬಂದಿದ್ದು, ಹೆಡ್‌ ಕಾನ್‌ಸ್ಟೆಬಲ್‌ ಹಾಗೂ ಕೆಎಸ್‌ಆರ್‌ಪಿ ವಾಹನ ಚಾಲಕನಿಗೆ ಸೋಂಕು ಇರುವುದು ದೃಢಪಟ್ಟಿತ್ತು. ಅದೇ ಕಾರಣಕ್ಕೆ ಅವರಿಬ್ಬರನ್ನು ಕೆಎಸ್‌ಆರ್‌ಪಿ ವಾಹನದಲ್ಲೇ ಆಸ್ಪತ್ರೆಗೆ ಕಳುಹಿಸಲಾಗಿತ್ತು.

‘ಮಾರ್ಗಮಧ್ಯೆಯೇ ಹೆಡ್‌ ಕಾನ್‌ಸ್ಟೆಬಲ್ ಅವರು ವಾಹನದಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT