ಮೇಲ್ವಿಚಾರಕರ ಕೌನ್ಸೆಲಿಂಗ್

ಭಾನುವಾರ, ಮೇ 26, 2019
31 °C

ಮೇಲ್ವಿಚಾರಕರ ಕೌನ್ಸೆಲಿಂಗ್

Published:
Updated:

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ(ಕೆಎಸ್‌ಆರ್‌ಟಿಸಿ) ದರ್ಜೆ–3 ಮೇಲ್ವಿಚಾರಕ ಹುದ್ದೆಗಳಿಗೆ ಆಯ್ಕೆಯಾದ 812 ಅಭ್ಯರ್ಥಿಗಳಿಗೆ ಕೌನ್ಸೆಲಿಂಗ್ ಮೂಲಕ ವಿಭಾಗಗಳ ಹಂಚಿಕೆ ಕಾರ್ಯ ಸೋಮವಾರ ನಿಗಮದ ಕೇಂದ್ರ ಕಚೇರಿಯಲ್ಲಿ ಆರಂಭವಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ನಿಗಮದ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ ಅವರು, ‘ಮಹಿಳೆಯರಿಗೆ ಶೇ 30ರಷ್ಟು ಮೀಸಲಾತಿ ಕಲ್ಪಿಸಲಾಗಿದೆ. ಮೆರಿಟ್ ಆಧರಿಸಿ ಕೌನ್ಸೆಲಿಂಗ್ ನಡೆಸಲಾಗುತ್ತಿದೆ’ ಎಂದರು.

‘ಮಂಗಳವಾರವೂ ಕೌನ್ಸೆಲಿಂಗ್ ನಡೆಯಲಿದೆ. ಇದೇ 16ರೊಳಗೆ ಕರ್ತವ್ಯಕ್ಕೆ ವರದಿ ಮಾಡಿಕೊಂಡು ಸಿಕ್ಕಿರುವ ಅವಕಾಶ ಸದ್ಬಳಕೆ ಮಾಡಿಕೊಳ್ಳಿ’ ಎಂದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !