ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾರಿಗೆ ನೌಕರರ ಒಗ್ಗಟ್ಟಿನ ಮಂತ್ರ

Last Updated 29 ಫೆಬ್ರುವರಿ 2020, 20:05 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರಿ ನೌಕರರನ್ನಾಗಿ ಮಾಡಬೇಕು ಎಂಬ ಏಕೈಕ ಬೇಡಿಕೆಯೊಂದಿಗೆ ಸಾರಿಗೆ ನಿಗಮಗಳ ನೌಕರರು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ನಿಟ್ಟಿನಲ್ಲಿ ಒಗ್ಗಟ್ಟಿನ ಮಂತ್ರ ಘೋಷಿಸಿದ್ದಾರೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಅಡಿಯಲ್ಲಿ ನೌಕರರ ಎಲ್ಲಾ ಸಂಘಟನೆಗಳು ಒಂದಾಗಿ ಸರ್ಕಾರಕ್ಕೆ ಒತ್ತಡ ಹೇರಲು ನಿರ್ಧರಿಸಿವೆ. ಈ ಸಂಬಂಧ ಕೂಟದ ಸಭೆ ಶನಿವಾರ ನಗರದಲ್ಲಿ ನಡೆಸಲಾಯಿತು.

ಕನ್ನಡ ಕ್ರಿಯಾ ಸಮಿತಿ, ಬಿಎಂಟಿಸಿ ಎಸ್‌ಸಿಎಸ್‌ಸಿ ನೌಕರರ ಸಂಘ, ಮುಸ್ಲಿಂ ನೌಕರರ ಸಂಘ ಸೇರಿ ಆರೇಳು ಸಂಘಟನೆಗಳ ಪದಾಧಿಕಾರಿಗಳು ಒಟ್ಟಿಗೆ ಸಭೆ ನಡೆಸಿದರು.

‘ರಾಜ್ಯ ಬಜೆಟ್‌ನಲ್ಲಿ ನೌಕರರ ಬೇಡಿಕೆಗೆ ಸ್ಪಂದನೆ ಸಿಗದಿದ್ದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಹಮ್ಮಿಕೊಳ್ಳಲಾಗುವುದು. ಬಸ್‌ಗಳ ಸಂಚಾರ ನಿಲ್ಲಿಸಿಯೇ ಸರ್ಕಾರದ ಕಣ್ಣು ತೆರೆಸಬೇಕಿಲ್ಲ. ಪ್ರಯಾಣಿಕರಿಗೆ ತೊಂದರೆ ಕೊಡದೆ, ಅವರಿಗೆ ಲಾಭ ಮಾಡಿಕೊಡುವ ನಿಟ್ಟಿನಲ್ಲೇ ಹೋರಾಟ ಇರಲಿದೆ’ ಎಂದು ಕೂಟದ ಅಧ್ಯಕ್ಷ ಚಂದ್ರಶೇಖರ್ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT