ಸೋಮವಾರ, 3 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಎಸ್‌ಆರ್‌ಟಿಸಿ ಬಸ್‌ ಚಕ್ರ ಹರಿದು ಸವಾರ ಸಾವು

Last Updated 24 ನವೆಂಬರ್ 2022, 19:42 IST
ಅಕ್ಷರ ಗಾತ್ರ

ಬೆಂಗಳೂರು: ಜೀವನ್‌ಬಿಮಾನಗರ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಬುಧವಾರ ಅಪಘಾತ ಸಂಭವಿಸಿದ್ದು, ಸವಾರ ಆರೀಸ್ (26) ಮೃತಪಟ್ಟಿದ್ದಾರೆ.

‘ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಮೂಡುಗೊಪ್ಪದ ಆರೀಸ್, ಹಲವು ವರ್ಷಗಳಿಂದ ನಗರದಲ್ಲಿ ನೆಲೆಸಿದ್ದರು. ವೈಟ್‌ಫೀಲ್ಡ್‌ನಲ್ಲಿ ಪಾದರಕ್ಷೆ ಮಾರಾಟ ಮಳಿಗೆ ಇಟ್ಟುಕೊಂಡಿದ್ದರು. ಅವರು ಬುಧವಾರ ಸಂಜೆ 6.50ರ ಸುಮಾರಿಗೆ ಬಜಾಜ್ ಪಲ್ಸರ್ ಬೈಕ್‌ನಲ್ಲಿ ಹೊರಟಿದ್ದಾಗ ಈ ಅವಘಡ ಸಂಭವಿಸಿದೆ’ ಎಂದು ಸಂಚಾರ ಪೊಲೀಸರು ಹೇಳಿದರು.

‘ಎಚ್‌ಎಎಲ್ ಕಡೆಯಿಂದ ಐಎಸ್‌ಆರ್‌ಒ ಕಡೆಗೆ ಕೆಎಸ್‌ಆರ್‌ಟಿಸಿ ಬಸ್ (ಕೆಎ 07 ಎಫ್‌ 1590) ಹೊರಟಿತ್ತು. ಚಾಲಕ, ಅತಿ ವೇಗವಾಗಿ ನಿರ್ಲಕ್ಷ್ಯದಿಂದ ಬಸ್ ಚಲಾಯಿಸಿದ್ದ. ಇದೇ ರಸ್ತೆಯಲ್ಲಿ ಹೊರಟಿದ್ದ ಆರೀಸ್‌ ಅವರ ಬೈಕ್‌ಗೆ ಬಸ್‌ ಡಿಕ್ಕಿ ಹೊಡೆದಿತ್ತು.’

‘ಬೈಕ್ ಸಮೇತ ರಸ್ತೆಯಲ್ಲಿ ಬಿದ್ದಿದ್ದ ಆರೀಸ್ ತಲೆ ಮೇಲೆ ಬಸ್ಸಿನ ಮುಂಭಾಗದ ಬಲ ಚಕ್ರ ಹರಿದಿತ್ತು. ತೀವ್ರ ಗಾಯಗೊಂಡ ಆರೀಸ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದರು.

‘ಬಸ್ ಚಾಲಕನ ನಿರ್ಲಕ್ಷ್ಯದಿಂದಲೇ ಅಪಘಾತ ಸಂಭವಿಸಿರುವುದು ಮೇಲ್ನೋಟಕ್ಕೆ ಗೊತ್ತಾಗಿದೆ. ಆತನ ವಿರುದ್ಧವೇ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಬಸ್ ಜಪ್ತಿ ಮಾಡಿ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಪೊಲೀಸರು ಹೇಳಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT