ಮಂಗಳವಾರ, ಮೇ 17, 2022
23 °C

ಕೆಂಗೇರಿ ಬಳಿ ಮೆಟ್ರೊ ಕಂಬಕ್ಕೆ KSRTC ಬಸ್ ಡಿಕ್ಕಿ: ನಾಲ್ವರಿಗೆ ಗಂಭೀರ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಡಿಕೇರಿಯಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಕೆಂಗೇರಿ ಬಳಿಯ ಮೆಟ್ರೊ ಪಿಲ್ಲರ್‌ಗೆ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ನಾಲ್ವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. 25 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.

'ಕೆ.ಆರ್‌.ನಗರ ಡಿಪೊಗೆ ಸೇರಿದ ಬಸ್‌, ಮಡಿಕೇರಿಯಿಂದ ನಗರಕ್ಕೆ ಬರುತ್ತಿದ್ದಾಗ ಕೆಂಗೇರಿಯ ಪೂರ್ಣಿಮಾ ಪ್ಯಾಲೇಸ್ ಬಳಿಯ ಮೆಟ್ರೊ ಪಿಲ್ಲರ್ 545ಕ್ಕೆ ಡಿಕ್ಕಿಯಾಗಿದೆ. ರಾತ್ರಿ 1.30ರ ಸುಮಾರಿಗೆ ಘಟನೆ ನಡೆದಿದೆ.
ಬಸ್‌ನಲ್ಲಿ ಸುಮಾರು 45 ಪ್ರಯಾಣಿಕರಿದ್ದರು. ಗಾಯಗೊಂಡವರನ್ನೆಲ್ಲಾ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ' ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು