ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಬರಿಮಲೆಗೆ ಕೆಎಸ್‌ಆರ್‌ಟಿಸಿ ಬಸ್

Last Updated 19 ನವೆಂಬರ್ 2022, 19:50 IST
ಅಕ್ಷರ ಗಾತ್ರ

ಬೆಂಗಳೂರು: ಶಬರಿಮಲೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಬೆಂಗಳೂರಿನಿಂದ ಪಂಪಾಗೆ (ಶಬರಿಮಲೆ) ರಾಜಹಂಸ ಮತ್ತು ವೋಲ್ವೊ ಬಸ್‌ಗಳ ಕಾರ್ಯಾಚರಣೆಯನ್ನು ಕೆಎಸ್‌ಆರ್‌ಟಿಸಿ ಆರಂಭಿಸಿದೆ.

ಡಿ.1ರಿಂದ ಬಸ್‌ಗಳ ಸಂಚಾರ ಆರಂಭವಾಗಲಿದೆ. ಬೆಂಗಳೂರು -ನಿಲಕ್ಕಲ್ ರಾಜಹಂಸ ಬಸ್ ಬೆಂಗಳೂರಿನಿಂದ ಪ್ರತಿದಿನ ಮಧ್ಯಾಹ್ನ 1.30ಕ್ಕೆ ಹೊರಟು ಮರುದಿನ ಬೆಳಿಗ್ಗೆ 8.15ಕ್ಕೆ ಪಂಪಾ ತಲುಪುತ್ತದೆ. ಅದೇ ದಿನ ಸಂಜೆ 5ಕ್ಕೆ ಪಂಪಾದಿಂದ ಹೊರಟು ಮರುದಿನ ಮಧ್ಯಾಹ್ನ 12ಕ್ಕೆ ಬೆಂಗಳೂರು ತಲುಪುತ್ತದೆ. ಪ್ರಯಾಣ ದರ ₹1,150 ನಿಗದಿ ಮಾಡಲಾಗಿದೆ.

ಬೆಂಗಳೂರು -ನಿಲಕ್ಕಲ್ ವೋಲ್ವೊ ಬಸ್ ಪ್ರತಿದಿನ ಮಧ್ಯಾಹ್ನ 2ಕ್ಕೆ ಹೊರಟು ಮರುದಿನ ಬೆಳಿಗ್ಗೆ 6.15ಕ್ಕೆ ಪಂಪಾ ತಲುಪುತ್ತದೆ. ಅದೇ ದಿನ ಸಂಜೆ 6ಕ್ಕೆ ಪಂಪಾದಿಂದ ಹೊರಟು ಮರುದಿನ ಬೆಳಿಗ್ಗೆ 9.45ಕ್ಕೆ ಬೆಂಗಳೂರು ತಲುಪುತ್ತದೆ. ಈ ಬಸ್ ಪ್ರಯಾಣ ದರ ₹1,490 ನಿಗದಿ ಮಾಡಲಾಗಿದೆ. ಈ ಎರಡೂ ಬಸ್‍ಗಳು ಶಾಂತಿನಗರ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಿವೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT