ಶನಿವಾರ, ಜುಲೈ 31, 2021
21 °C

ಕೆಎಸ್‌ಆರ್‌ಟಿಸಿ ಮುಂಗಡ ಟಿಕೆಟ್‌ ಬುಕ್ಕಿಂಗ್‌ ರದ್ದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಲಾಕ್‍ಡೌನ್ ಅವಧಿಯಲ್ಲಿ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಕೆಎಸ್‍ಆರ್‌ಟಿಸಿ ಬಸ್‌ಗಳ ಸಂಚಾರ ಹಾಗೂ ಬೆಂಗಳೂರಿನಿಂದ ಅಂತರರಾಜ್ಯ ಸಾರಿಗೆ ಸೇವೆ ಇರುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

ಈ ಅವಧಿಯಲ್ಲಿ ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ ಹಾಗೂ ಇತರ ಸ್ಥಳಗಳಿಂದ ಬೆಂಗಳೂರಿಗೆ ಬರುವ ಬಸ್‍ಗಳ ಮುಂಗಡ ಟಿಕೆಟ್ ಬುಕ್ಕಿಂಗ್ ರದ್ದು ಮಾಡಲಾಗಿದ್ದು, ಕಾಯ್ದಿರಿಸಿದ ಪ್ರಯಾಣಿಕರಿಗೆ ಹಣ ಮರುಪಾವತಿ ಮಾಡಲಾಗುವುದು. ಜಿಲ್ಲಾಡಳಿತದ ಆದೇಶದನ್ವಯ ಉಳಿದ ಜಿಲ್ಲೆಗಳಲ್ಲಿ ಬಸ್ ಕಾರ್ಯಾಚರಣೆ ಇರಲಿದೆ ಎಂದು ತಿಳಿಸಿದೆ.

ಮಂಗಳವಾರ ರಾತ್ರಿ 8 ಗಂಟೆಯವರೆಗೆ ಬೆಂಗಳೂರಿನಿಂದ 1,300 ಬಸ್‍ಗಳಲ್ಲಿ ಒಟ್ಟು 26 ಸಾವಿರ ಮಂದಿ ಪ್ರಯಾಣಿಸಿದ್ದಾರೆ. ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಬಳ್ಳಾರಿ, ಯಾದಗಿರಿ ಜಿಲ್ಲೆಗಳಿಗೆ ಹೆಚ್ಚು ಬಸ್ಸುಗಳು ಕಾರ್ಯಾಚರಣೆ ನಡೆಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು