ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ವೇತನ ಹೆಚ್ಚಳದ ಒಪ್ಪಂದದಂತೆ 2020ರ ಜ. 1ರಿಂದ ಇದುವರೆಗಿನ ವೇತನ ಹೆಚ್ಚಳದ ಬಾಕಿ ಹಣ ನೀಡಬೇಕು ಎಂದು ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಒತ್ತಾಯಿಸಿದೆ.
ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಕೆ.ಎಸ್.ಆರ್.ಟಿ.ಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಮುಖಂಡ ಎಚ್.ವಿ. ಅನಂತಸುಬ್ಬರಾವ್, ‘ಸಾರಿಗೆ ನಿಗಮಗಳು ಬೃಹತ್ ಆಗಿ ಬೆಳೆಯಲು ಸರ್ಕಾರ ಎಷ್ಟು ಕೊಡುಗೆ ನೀಡಿದೆಯೂ ಅಷ್ಷೇ ಕೊಡುಗೆಯನ್ನು ಇಲ್ಲಿನ ಕಾರ್ಮಿಕರು ಮತ್ತು ಅಧಿಕಾರಿಗಳು ನೀಡಿದ್ದಾರೆ. ಈಗಾಗಲೇ ನಾಲ್ಕು ನಿಗಮಗಳ ನೌಕರರ ವೇತನ ಪರಿಷ್ಕರಣೆ ಮತ್ತಿತರ ಬೇಡಿಕೆಗಳನ್ನು ಇತ್ಯರ್ಥಗೊಳಿಸಬೇಕು’ ಎಂದು ತಿಳಿಸಿದ್ದಾರೆ.
ಜಂಟಿ ಕ್ರಿಯಾ ಸಮಿತಿಯಿಂದ ಸಾರಿಗೆ ನಿಗಮಗಳ ನೌಕರರ ಜಾಗೃತಿ ಸಮಾವೇಶ ನಡೆಸಿ ಹಲವಾರು ಬೇಡಿಕೆಗಳನ್ನು ಸಾರಿಗೆ ಸಚಿವರ ಮತ್ತು ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಾರ್ಮಿಕರ ಜೀವನ ತತ್ತರಿಸಿದೆ. ಈ ಕೂಡಲೇ ಸಮಿತಿಯ ಜೊತೆ ಚರ್ಚಿಸಿ ಕೈಗಾರಿಕಾ ಒಪ್ಪಂದವನ್ನು ಮಾಡಲು ಸಾರಿಗೆ ನಿಗಮಗಳ ಆಡಳಿತ ವರ್ಗಕ್ಕೆ ನಿರ್ದೇಶನ ನೀಡಬೇಕು’ ಎಂದು ಆಗ್ರಹಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.